ಮೈಸೂರು : 70 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 29 : ಮೈಸೂರು ಜಿಲ್ಲಾ ಕಂದಾಯ ಘಟಕದ ತಾಲೂಕು ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 28/8/2019 ಕೊನೆಯ ದಿನವಾಗಿದೆ.

ಒಟ್ಟು 70 ಹುದ್ದೆಗಳನ್ನು (5 ಬ್ಯಾಕ್ ಲಾಗ್ ) ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಆಗಸ್ಟ್ 28ರ ಸಂಜೆ 5.30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ಸಿಬಿಎಸ್‌ಇ ಅಥವ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರತಕ್ಕದ್ದು.

Apply For Village Accountant Post Mysuru

ಮೇಲ್ಕಂಡ ವಿದ್ಯಾರ್ಹತೆ ಹೊರತುಪಡಿಸಿ ಇನ್ನಿತರ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಹಾಗೂ ಮುಕ್ತ ವಿಶ್ವವಿದ್ಯಾಲಯದಿಂದ ಪಡೆದ ವಿದ್ಯಾರ್ಹತೆಯನ್ನು ಈ ಹುದ್ದೆಗೆ ಪರಿಗಣಿಸುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಅಭ್ಯರ್ಥಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.

ವಯೋಮಿತಿ ವಿವರ : ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿ 38 ವರ್ಷ, ಪ್ರವರ್ಗ -1/ಪ.ಜಾ/ಪ.ಪಂ ದವರಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ರೂ. 25, ಪ್ರವರ್ಗ-1/2ಎ/2ಬಿ/3ಎ/3ಬಿ ರೂ. 150, ಇತರೆ ರೂ. 300 ರೂ. ಶುಲ್ಕ ನಿಗದಿ ಮಾಡಲಾಗಿದೆ. ಬ್ಯಾಂಕ್ ಶುಲ್ಕ ಪ್ರತ್ಯೇಕವಾಗಿದೆ. ಆನ್‌ಲೈನ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಚಲನ್ ಹಾಗೂ ಇತ್ಯಾದಿಗಳ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ಗೆ ಶುಲ್ಕವನ್ನು ಜಮಾ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+