ಉಡುಪಿ : 12 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಡಿಸೆಂಬರ್ 16 : ಉಡುಪಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 31/12/2018 ಕೊನೆಯ ದಿನವಾಗಿದೆ.
ಒಟ್ಟು 12 ಗ್ರಾಮ ಲೆಕ್ಕಿಗ (village accountant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೆಓಸಿ, ಡಿಪ್ಲೊಮಾ ಇನ್ನಿತರ ವಿದ್ಯಾರ್ಹತೆಗಳನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.

ವಯೋಮಿತಿ ವಿವರ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪ.ಜಾ/ಪ.ಪಂ/ಪ್ರವರ್ಗ -1 ರ ಅಭ್ಯರ್ಥಿಗಳಿಗೆ 40 ವರ್ಷ, 2ಎ/2ಬಿ/3ಎ/3ಬಿ 38 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳು ರೂ.100, ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗಕ್ಕೆ ರೂ.200 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಬಳಿಕ ದೊರೆಯುವ ಚಲನ್ ಪಡೆದುಕೊಂಡು ಶುಲ್ಕವನ್ನು ಸಿಂಡಿಕೇಟ್ ಅಥವ ಕಾರ್ಪೊರೇಶನ್ ಬ್ಯಾಂಕ್‌ನಲ್ಲಿ ಪಾವತಿಸಬೇಕು.
ಅರ್ಜಿಗಳನ್ನು ಸಲ್ಲಿಸಲು ವಿಳಾಸ












Click it and Unblock the Notifications