ಬಳ್ಳಾರಿ : 61 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ ಇವೆ

ಬಳ್ಳಾರಿ, ಜುಲೈ 13 : ಬಳ್ಳಾರಿ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗಾಗಿ ತೆರವಾಗಿರುವ 61 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21, 2015.

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. http://ballari-va.kar.nic.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಭರ್ತಿ ಮಾಡಬಹುದಾಗಿದೆ. [ನೇಮಕಾತಿ ಆದೇಶ ಓದಿ]

bellari

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಸಾಮಾನ್ಯ/2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳು 200 ರೂ. ಶುಲ್ಕ ಪಾವತಿ ಮಾಡಬೇಕು.

ಅರ್ಜಿಯನ್ನು ಭರ್ತಿ ಮಾಡಿದ ನಂತರ ದೊರೆಯುವ ಚಲನ್ ಪಡೆದು, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬ್ಯಾಂಕ್‌ನ ಯಾವುದಾದರೂ ಶಾಖೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು. ಅರ್ಜಿ ಶುಲ್ಕವನ್ನು ಜಿಲ್ಲಾಧಿಕಾರಿಗಳು, ಬಳ್ಳಾರಿ ಇವರ ಖಾತೆಗೆ ನಂ 64043310450 ಖಾತೆಗೆ ಪಾವತಿಯಾಗುವಂತೆ ಸಲ್ಲಿಸಬೇಕು. [ಕೊಪ್ಪಳದಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ ಇವೆ]

ವಿದ್ಯಾರ್ಹತೆ : ಪಿಯುಸಿ ಪರೀಕ್ಷೆಯಲ್ಲಿ ಅಥವ CBSE/ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊರತುಪಡಿಸಿ ಬೇರೆ ಯಾವುದೇ ವಿದ್ಯಾರ್ಹತೆ ಪರಿಗಣಿಸುವುದಿಲ್ಲ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.

ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕೆಳಕಂಡಂತೆ ವಯೋಮಿತಿ ಹೊಂದಿರಬೇಕು. ಕನಿಷ್ಠ ವಯೋಮಿತಿ 18 ವರ್ಷಗಳು. ಪ.ಜಾ/ಪ.ಪಂ/ಪ್ರವರ್ಗ-1 ಗರಿಷ್ಟ 40 ವರ್ಷ, 2ಎ/2ಬಿ/3ಎ/3ಬಿ 38 ವರ್ಷಗಳು. ಸಾಮಾನ್ಯ ವರ್ಗ 35 ವರ್ಷಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+