ಕಲಬುರಗಿ ಕಂದಾಯ ಇಲಾಖೆಯಲ್ಲಿ 30 ಹುದ್ದೆಗಳು ಖಾಲಿ ಇವೆ

ಕಲಬುರಗಿ, ಜುಲೈ 14 : ಕಲಬುರಗಿ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 30 ಹುದ್ದೆಗಳಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 1, 2015.

30 ಹುದ್ದೆಗಳನ್ನು ಹೈದರಾಬಾದ್ ಕರ್ನಾಟಕ ಭಾಗದ ಅಭ್ಯರ್ಥಿಗಳಿಗಾಗಿ ಮೀಸಲಾಗಿಡಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದ್ದು ಅಂಚೆ ಮೂಲಕ ಅಥವ ಖುದ್ದಾಗಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

kalaburagi

ವಿದ್ಯಾರ್ಹತೆ : ಪಿಯುಸಿ ಪರೀಕ್ಷೆ ಅಥವ CBSE ಅಥವ ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿಗಳನ್ನು ಪಾವತಿ ಮಾಡಲು ಕೊನೆಯ ದಿನಾಂಕ ಆಗಸ್ಟ್ 1, 2015. ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ ಆಗಸ್ಟ್ 4. ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಶಾಖೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. [ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ]

ಅರ್ಜಿ ಶುಲ್ಕದ ವಿವರ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1ರ ಅಭ್ಯರ್ಥಿಗಳಿಗೆ ಮತ್ತು ಮಾಜಿ ಸೈನಿಕರಿಗೆ 200 ರೂ.ಗಳು. ಇತರೆ ಅಭ್ಯರ್ಥಿಗಳಿಗೆ 400 ರೂ.ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. [ಅರ್ಜಿ ಸಲ್ಲಿಸಲು ವಿಳಾಸ]

ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕೆಳಗಿನಂತೆ ವಯೋಮಿತಿ ಹೊಂದಿರತಕ್ಕದ್ದು. ಪ.ಜಾ/ಪ.ಪಂ/ಪ್ರ-1 ಗರಿಷ್ಠ 40 ವರ್ಷ. 2ಎ/2ಬಿ/3ಎ/3ಬಿ 38 ವರ್ಷಗಳು. ಸಾಮಾನ್ಯ ವರ್ಗದವರಿಗೆ 35 ವರ್ಷಗಳು.

ನೇಮಕಾತಿ ಆದೇಶ ಮತ್ತು ಅರ್ಜಿಯನ್ನು ಭರ್ತಿ ಮಾಡುವ ವಿವರವನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಹೆಚ್ಚಿನ ಮಾಹಿತಿ ಅಗತ್ಯವಿದ್ದರೆ 08472-278605 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+