ಕೊಪ್ಪಳ ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

ಕೊಪ್ಪಳ, ಜೂ. 19 : ಕೊಪ್ಪಳ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 51 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 21, 2015 ಕೊನೆಯ ದಿನ.

51 ಹುದ್ದೆಗಳ ಪೈಕಿ ಹೈದರಾಬಾದ್-ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಒಟ್ಟು 40 ಹುದ್ದೆಗಳನ್ನು ಮೀಸಲಾಗಿಡಲಾಗಿದೆ. ಇತರೆ ಪ್ರದೇಶದವರಿಗೆ ಒಟ್ಟು 11 ಹುದ್ದೆಗಳಿವೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. [ಅರಣ್ಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ]

job

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಪ.ಜಾ/ ಪ.ಪಂ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ. ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ವರ್ಗದವರಿಗೆ 35 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಅಥವಾ ಸಿ.ಬಿ.ಎಸ್.ಸಿ/ಐ.ಸಿ.ಎಸ್.ಸಿ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. [ಐಡಿಬಿಐ ಬ್ಯಾಂಕ್ ನಲ್ಲಿ 500 ಹುದ್ದೆಗಳು ಖಾಲಿ ಇವೆ]

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 200 ರೂ., ಸಾಮಾನ್ಯ ವರ್ಗ, 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 400 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

http://koppal-va.kar.nic.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಜೂ.22 ನಂತರ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21, 2015. ಹೆಚ್ಚಿನ ಮಾಹಿತಿಗಾಗಿ 08539-221690 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+