ಉಡುಪಿ : ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ
ಉಡುಪಿ, ಆಗಸ್ಟ್ 21 : ಉಡುಪಿ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 15 ಹುದ್ದೆಗಳಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 15, 2015.
ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದ್ದು, ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಆ.17ರಿಂದ ಸೆಪ್ಟೆಂಬರ್ 15ರ ತನಕ http://udupi.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. [ಅರ್ಜಿ ತುಂಬುವುದು ಹೇಗೆ?]

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವ ICSE ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು. ಜೆಒಸಿ, ಡಿಪ್ಲೊಮೋ ಸೇರಿದಂತೆ ಇತರ ಯಾವ ವಿದ್ಯಾರ್ಹತೆಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. [ಸರ್ಕಾರಿ ಉದ್ಯೋಗದ ಪೂರ್ಣ ಮಾಹಿತಿ ಇಲ್ಲಿ ಲಭ್ಯ]
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕು.
ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಲಭ್ಯವಾಗುವ ಚಲನ್ ಪ್ರತಿ ತೆಗೆದುಕೊಂಡು ಸಿಂಡಿಕೇಟ್ ಅಥವ ಕಾರ್ಪೊರೇಷನ್ ಬ್ಯಾಂಕ್‌ನಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. [ಅರ್ಜಿ ಸಲ್ಲಿಸಲು ವಿಳಾಸ]
ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಪ.ಜಾ/ಪ.ಪಂ/ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿ 40 ವರ್ಷಗಳು. 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು. [ಚಿತ್ರದುರ್ಗದಲ್ಲಿ ಕೆಲಸ ಖಾಲಿ ಇದೆ]












Click it and Unblock the Notifications