ಉತ್ತರ ಕನ್ನಡ : ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ
ಉತ್ತರ ಕನ್ನಡ, ಸೆ.15 : ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಬರುವ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 43 ಹುದ್ದೆಗಳಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 9, 2015.
ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಕೆ ಮಾಡಲು ಅವಕಾಶವಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.[ಅರ್ಜಿ ಸಲ್ಲಿಸಲು ವಿಳಾಸ]

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪಿಯು ಬೋರ್ಡ್ ನಡೆಸುವ ಪಿಯುಸಿ ಪರಿಕ್ಷೇ ಅಥವ ಸಿಬಿಎಸ್‌ಇ ಅಥವ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಬೇರೆ ಯಾವುದೇ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ. [ನೇಮಕಾತಿ ಆದೇಶ ಇಲ್ಲಿದೆ]
ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಪ.ಜಾ/ಪ.ಪಂ/ಪ್ರವರ್ಗ -1 ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ. 2ಎ/2ಬಿ/3ಎ/3ಬಿ ವರ್ಗದವರಿಗೆ 38 ವರ್ಷ. ಸಾಮಾನ್ಯ ವರ್ಗದವರಿಗೆ 35 ವರ್ಷಗಳು. [ಬಿಇಎಂಎಲ್ ನಲ್ಲಿ 43 ಹುದ್ದೆಗಳಿಗೆ ಅರ್ಜಿ ಆಹ್ವಾನ]
ಶುಲ್ಕದ ವಿವರ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 100 ರೂ. (ಬ್ಯಾಂಕ್ ಶುಲ್ಕ ಹೊರತುಪಡಿಸಿ), ಇತರೆ ಅಭ್ಯರ್ಥಿಗಳಿಗೆ 200 ರೂ> ಮಾತ್ರ. ಅರ್ಜಿಯನ್ನು ಭರ್ತಿ ಮಾಡಿದ ನಂತರ ಆನ್‌ಲೈನ್ ಮೂಲಕ ಶುಲ್ಕವನ್ನು ಪಾವತಿ ಮಾಡಬಹುದು.
ಆನ್‌ಲೈನ್ ಮೂಲಕ ಪಾವತಿ ಮಾಡಲು ಸಾಧ್ಯವಾಗದಿದ್ದಲ್ಲಿ ಎಸ್.ಬಿ.ಐ ಬ್ಯಾಂಕ್‌ನಲ್ಲಿ ಪಾವತಿ ಮಾಡಬಹುದು. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ಅಕ್ಟೋಬರ್ 13, 2015.












Click it and Unblock the Notifications