ಕೊಡಗಿನಲ್ಲಿ ಕೆಲಸ ಖಾಲಿ ಇದೆ, 9 ಸಾವಿರ ವೇತನ, ಅರ್ಜಿ ಹಾಕಿ

ಮಡಿಕೇರಿ, ಜನವರಿ 27; ಕೊಡಗು ಜಿಲ್ಲೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮತ್ತು ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಫೆಬ್ರವರಿ 15ರೊಳಗೆ ಆಸಕ್ತರು ಅರ್ಜಿ ಸಲ್ಲಿಸಬಹುದು.

ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇದ್ದು, ಅರ್ಜಿ ಕರೆಯಲಾಗಿದೆ.

ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನ 9 ಸಾವಿರ ರೂ.ಗಳು. ಅರ್ಜಿಗಳನ್ನು ಸಲ್ಲಿಕೆ ಮಾಡುವವರು ಎಸ್‌ಎಸ್‌ಎಲ್‌ಸಿ ಉತ್ತೀರ್ಣ/ ಅನುತ್ತೀರ್ಣರಾಗಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು.

Apply For Village And Urban Rehabilitation Worker Post At Kodagu

ಹುದ್ದೆಗಳು ಖಾಲಿ ಇರುವ ವಿವರ; ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳು ನಗರಸಭೆ ಮಡಿಕೇರಿ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇವೆ.

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ, ಚೆಂಬು, ಕುಂಜಿಲ, ಕೊಣಂಜಗೇರಿ, ಸೋಮವಾರಪೇಟೆ ತಾಲ್ಲೂಕಿನ ಚೆಟ್ಟಳ್ಳಿ, ಹಂಡ್ಲಿ, ಅಲೂರು ಸಿದ್ದಾಪುರ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ, ಬಿರುನಾಣಿ, ದೇವರಪುರ, ಗೋಣಿಕೊಪ್ಪ, ಹಾಲುಗುಂದ, ನಿಟ್ಟೂರು, ನಾಲ್ಕೇರಿ, ಪೊನ್ನಪ್ಪಸಂತೆ, ಕದನೂರು, ಕೆ.ಬಾಡಗ, ಕಿರುಗೂರು, ತಿತಿಮತಿ, ಶ್ರೀಮಂಗಲದಲ್ಲಿ ಖಾಲಿ ಇವೆ.

ಆಸಕ್ತರು ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯಿತಿಗಳಲ್ಲಿರುವ ಎಂಆರ್‌ಡಬ್ಲ್ಯುಗಳಿಂದ ಉಚಿತವಾಗಿ ಪಡೆದು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿ, ಕಚೇರಿಗೆ ಅಥವಾ ಎಂಆರ್‌ಡಬ್ಲ್ಯುಗಳಿಗೆ ಸಲ್ಲಿಸಬೇಕು.

ಆಕ್ಷೇಪಣೆಗಳು ಆಹ್ವಾನ; ಕಲಬುರಗಿ ಮಹಾನಗರ ಪಾಲಿಕೆಯ ಶೇ 24.10ರ ಯೋಜನೆಯಡಿ 2022-23ನೇ ಸಾಲಿಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಗುತ್ತಿಗೆ/ ಖಾಯಂ ಪೌರಕಾರ್ಮಿಕರ ಮಕ್ಕಳಿಗೆ/ ಪತಿ/ ಪತ್ನಿಯರು ಸಣ್ಣ ಉದ್ದಿಮೆಗಾಗಿ ಸಹಾಯಧನಕ್ಕೆ ಸಂಬಂಧಿಸಿದಂತೆ ಅರ್ಹ ಹಾಗೂ ಅನರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಲಬುರಗಿ ಮಹಾನಗರ ಪಾಲಿಕೆ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತರು (ಆಡಳಿತ) ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಏನಾದರು ಆಕ್ಷೇಪಣೆಗಳಿದ್ದಲ್ಲಿ 2023ರ ಫೆಬ್ರವರಿ 8ರೊಳಗಾಗಿ ಪೂರಕ ದಾಖಲೆಗಳೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ತದನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+