ದಾವಣಗೆರೆ; ಕೆಲಸ ಖಾಲಿ ಇದೆ, ಜ.20ರೊಳಗೆ ಅರ್ಜಿ ಹಾಕಿ

ದಾವಣಗೆರೆ, ಜನವರಿ 07; ದಾವಣಗೆರೆ ತಾಲ್ಲೂಕು ಕಸಬಾ ಹೋಬಳಿ ನಿಟುವಳ್ಳಿ ಫಿರ್ಕಾ ಗ್ರಾಮ ಸಹಾಯಕರ ಖಾಲಿ ಇರುವ ಹುದ್ದೆ ಭರ್ತಿ ಮಾಡಲು ತಹಶೀಲ್ದಾರ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಖಾಲಿ ಇರುವ ಗ್ರಾಮ ಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು ಮತ್ತು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕು. ಕನಿಷ್ಠ ವಯೋಮಿತಿ 25 ವರ್ಷಗಳು.

ವಿದ್ಯಾವಂತರಾಗಿರಬೇಕು, ಓದಲು ಹಾಗೂ ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು. ಗ್ರಾಮ ಸಹಾಯಕ, ತಳವಾರರು, ತೋಟಿಗಳು, ನೀರುಗಂಟಿಗಳು, ವಾಲಿಕರ್ಸ್, ಮಹರ್ಸ್, ಬಾರಿಕರ್ಸ್, ನೀರಾಡಿಗಳು, ಬಲೂತಿದಾರ್ಸ್, ತಳಯಾರಿಸ್, ವೆಟಿಸ್, ಕುಲವಡಿಸ್, ಉರ್‍ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುವುದು.

Apply For Village Assistant Post At Davanagere

ಭರ್ತಿ ಮಾಡಿದ ಅರ್ಜಿಯೊಂದಿಗೆ ಜನ್ಮ ದಿನಾಂಕ ದೃಢೀಕರಿಸಲು ಶಾಲಾ ವರ್ಗಾವಣೆ ಪತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಲಗತ್ತಿಸಬೇಕು. ವಾಸಸ್ಥಳ ದೃಢೀಕರಣ ಪತ್ರ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ವ್ಯಾಸಂಗ ಪೂರೈಸಿದ ಬಗ್ಗೆ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

20 ರೂ. ಸ್ಟಾಂಪ್ ಪೇಪರ್‌ನಲ್ಲಿ ಸ್ವಯಂ ಘೋಷಣಾ ಪ್ರಮಾಣ ಪತ್ರ, ವಂಶವೃಕ್ಷ, ಒಪ್ಪಿಗೆ ಪ್ರಮಾಣಪತ್ರ (ಒಂದೇ ಕುಟುಂಬದವರಾಗಿದ್ದರೆ), ಚಾರಿತ್ರ್ಯದ ಬಗ್ಗೆ ಪೊಲೀಸ್ ವರದಿ ಸಲ್ಲಿಸಬೇಕು.

ಆಸಕ್ತಿಯುಳ್ಳವರು ಅಗತ್ಯ ದಾಖಲೆಗಳ ವಿವರಗಳನ್ನು ಜನವರಿ 20ರ ಸಂಜೆ 5.30 ರೊಳಗೆ ದಾವಣಗೆರೆ ತಾಲ್ಲೂಕು ಕಛೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಸಮುದಾಯ ಸಂಪನ್ಮೂಲ ಹುದ್ದೆಗೆ ಅರ್ಜಿ ಹಾಕಿ; ದಾವಣಗೆರೆ ಜಿಲ್ಲೆಯ ಚನ್ನಗಿರಿ ಪುರಸಭೆ ವತಿಯಿಂದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.

ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಮಹಿಳಾ ಅಭ್ಯರ್ಥಿಗಳು ಜನವರಿ 18ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಗರಸಭೆ ವ್ಯಾಪ್ತಿಯಲ್ಲಿನ ನೋಂದಾಯಿತ ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ.

ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ 2. ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು, ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುವುದು. ಮಾಸಿಕ ಗೌರವಧನ 8000 ರೂ. ಮತ್ತು ಪ್ರಯಾಣ ಭತ್ಯೆ 2000 ರೂ. ಆಗಿದೆ.

ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯ (ಪ್ರಮಾಣ ಪತ್ರ ಬೇಕು). ನಗರಸಭೆ ವ್ಯಾಪ್ತಿಯಲ್ಲಿ ಖಾಯಂ ನಿವಾಸಿಯಾಗಿದ್ದು ಕನಿಷ್ಟ 3 ವರ್ಷ ಸ್ವ-ಸಹಾಯ ಸಂಘದಲ್ಲಿ ಸದಸ್ಯರಾಗಿರಬೇಕು. ಯಾವುದೇ ಸರ್ಕಾರಿ / ಅರೆಸರ್ಕಾರಿ/ ಎನ್.ಜಿ.ಓ ಗಳಲ್ಲಿ ಉದ್ಯೋಸ್ಥರಾಗಿರಬಾರದು.

ಉತ್ತಮ ಸಂವಹನ ಕೌಶಲ್ಯದ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೊಳ್ಳುವ ಇಚ್ಚಾಶಕ್ತಿ ಹೊಂದಿರಬೇಕು. ಕಾರ್ಯನಿಮಿತ್ತ ಅಗತ್ಯವಿದ್ದಲ್ಲಿ ಹೊರ ಸಂಚಾರಕ್ಕೆ ಸಿದ್ದರಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷ.

ಆಸಕ್ತ ಮಹಿಳಾ ಆಭ್ಯರ್ಥಿಗಳು ನಗರಸಭೆ ಕಚೇರಿ ಅವಧಿಯಲ್ಲಿ ಕಚೇರಿ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು. ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಮುಖ್ಯಾಧಿಕಾರಿಗಳು, ಪುರಸಭೆ, ಚನ್ನಗಿರಿ ಇವರಿಗೆ ಸಲ್ಲಿಕೆ ಮಾಡಬೇಕು.

ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆ ಸಹ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಕರೆದಿದೆ. ಒಟ್ಟು ಮೂರು ಹುದ್ದೆಗೆಳನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಜನವರಿ 18 ರಂದು ಸಂಜೆ 5.30ರ ರೊಳಗಾಗಿ ದ್ವಿಪ್ರತಿಯಲ್ಲಿ ಪೌರಾಯುಕ್ತರು ನಗರಸಭೆ ಹರಿಹರ ಅವರಿಗೆ ಅರ್ಜಿ ಸಲ್ಲಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+