ದಾವಣಗೆರೆ; ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ, ಫೆಬ್ರವರಿ 13; ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಅಣಬೇರು ವೃತ್ತ ವ್ಯಾಪ್ತಿಯ ಗ್ರಾಮ ಸಹಾಯಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಅರ್ಜಿ ಸಲ್ಲಿಕೆ ಮಾಡಲು ಫೆಬ್ರವರಿ 21 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿದ್ಯಾವಂತರಾಗಿರಬೇಕು (ಓದಲು ಹಾಗೂ ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು). ಖಾಲಿ ಇರುವ ಗ್ರಾಮ ಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು ಮತ್ತು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕು.

ಗ್ರಾಮಸಹಾಯಕ, ತಳವಾರರು, ತೋಟಿಗಳು, ನೀರುಗಂಟಿಗಳು, ವಾಲಿಕರ್ಸ್, ಮಹರ್ಸ್, ಬಾರಿಕರ್, ನೀರಾಡಿಗಳು, ಬಲೂತಿದಾರ್, ತಳಯಾರಿಸ್, ವೆಟಿಸ್, ಕುಲವಡಿಸ್ ಉರ್‍ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳಿಗೆ ಕನಿಷ್ಟ ವಯೋಮಿತಿ 25 ವರ್ಷಗಳು.

Apply For Village Assistant Post At Davanagere On February 21

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯೊಂದಿಗೆ ಜನ್ಮ ದಿನಾಂಕದ ದಾಖಲೆ, ವಾಸಸ್ಥಳ ದೃಢೀಕರಣ, ಚುನಾವಣೆ ಗುರುತಿನ ಚೀಟಿ/ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.

ಅರ್ಜಿಯೊಂದಿಗೆ 20 ರೂ. ಸ್ಟಾಂಪ್ ಪೇಪರ್ ಮೇಲೆ ಸ್ವಯಂ ಘೋಷಣಾ ಪ್ರಮಾಣ ಪತ್ರ, ವಂಶವೃಕ್ಷ, ಒಪ್ಪಿಗೆ ಪ್ರಮಾಣ ಪತ್ರ, ಚಾರಿತ್ರ್ಯದ ಬಗ್ಗೆ ಪೊಲೀಸ್ ವರದಿ ಲಗತ್ತಿಸಿ ಸಲ್ಲಿಸಬೇಕು.

ಆಸಕ್ತಿಯುಳ್ಳವರು ಅಗತ್ಯ ದಾಖಲಾತಿಗಳ ವಿವರಗಳನ್ನು ಫೆಬ್ರವರಿ 21ರ ಸಂಜೆ 5.30 ರೊಳಗೆ ದಾವಣಗೆರೆ ತಾಲೂಕು ತಹಶೀಲ್ದಾರ್ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿಕಾರಿಪುರದಲ್ಲಿ ಕೆಲಸ ಖಾಲಿ ಇದೆ; ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಶಿಕಾರಿಪುರದ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಯನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡುತ್ತಿದೆ.

ಈ ಹುದ್ದೆಗಳು ತಾತ್ಕಾಲಿಕವಾಗಿದ್ದು ಸ್ಥಳೀಯ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಬಹುದಾಗಿದೆ. ಶಿಕಾರಿಪುರ ತಾಲೂಕಿನ ಹಾರೋಗೊಪ್ಪ, ತರಲಘಟ್ಟ, ಕಲ್ಮನೆ, ಬಳ್ಳಿಗಾವಿ, ಬಗನಕಟ್ಟೆ, ಮುದ್ದನಹಳ್ಳಿ, ಮುಡುಬಸಿದ್ದಾಪುರ ಮತ್ತು ಹೋತನಕಟ್ಟೆ ಗ್ರಾಮ ಪಂಚಾಯತಿಗಳಲ್ಲಿ ಹುದ್ದೆಗಳು ಖಾಲಿ ಇವೆ.

10ನೇ ತರಗತಿ ಉತ್ತೀರ್ಣ ಹೊಂದಿರುವ 18 ರಿಂದ 45 ವರ್ಷದೊಳಗಿನ ಸ್ಥಳೀಯ ಅರ್ಹ ವಿಕಲಚೇತನರು ನಿಗದಿತ ನಮೂನೆ ಅರ್ಜಿಗಳನ್ನು ತಾಲೂಕು ಪಂಚಾಯಿತಿಯ ಎಂ.ಆರ್.ಡಬ್ಲ್ಯೂ ಅವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 28ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ನಿಗದಿತ ನಮೂನೆಯ ಅರ್ಜಿ ಮತ್ತು ಹೆಚ್ಚಿನ ಮಾಹಿತಿಗಾಗಿ ಹುಚ್ಚರಾಯಪ್ಪ 9741161346 ಅವರಿಗೆ ಕರೆ ಮಾಡಬಹುದಾಗಿದೆ.

ಉದ್ಯಮ ಶೀಲತಾ ಶಿಬಿರ; ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಗಳ ಪ್ರಯೋಜಕತ್ವದಲ್ಲಿ ಧಾರವಾಡದ ಕರ್ನಾಟಕ ಉದ್ಯಮಶಿಲತಾಭಿವೃದ್ಧಿ ಕೇಂದ್ರ (ಸಿಡಾಕ್) ದಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿಯುಳ್ಳ ಕಲಬುರಗಿ ಜಿಲ್ಲೆಯ ಪುರುಷ ಮತ್ತು ಮಹಿಳೆಯರಿಗೆ ಫೆಬ್ರವರಿ ತಿಂಗಳಿನಲ್ಲಿ ಕಲಬುರಗಿಯಲ್ಲಿ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರವನ್ನು ಆಯೋಜಿಸಲಾಗಿದೆ.

ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಶಿಬಿರದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು ಮತ್ತು ಮತ್ತಿತರ ವಿಷಯಗಳ ಕುರಿತು ಮಾಹಿತಿ ನೀಡಲಾಗುತ್ತದೆ.

ಈ ಶಿಬಿರದಲ್ಲಿ ಪಾಲ್ಗೊಳ್ಳಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 40 ವರ್ಷಗಳು. ಕಲಬುರಗಿ ಜಿಲ್ಲೆಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ 9916006910, 8618797704ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+