ಧಾರವಾಡ; ಕುಂದಗೋಳದಲ್ಲಿ ಕೆಲಸ ಖಾಲಿ ಇದೆ
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹರ್ಲಾಪುರ ಗ್ರಾಮ ಪಂಚಾಯತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ಭರ್ತಿ ಮಾಡಲಾಗುತ್ತಿದೆ.
ಧಾರವಾಡ, ಫೆಬ್ರವರಿ 15; ಧಾರವಾಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವ ಧನ ರೂ. 9,000 ಆಗಿದೆ.
ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಇಲಾಖೆ ಮತ್ತು ಸರ್ಕಾರದಿಂದ ದೊರೆಯಲಾಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಹಾಗೂ ದೊರಕಿಸಿಕೊಡಲು ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರು ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ನೇಮಕ ಮಾಡಲಾಗುತ್ತದೆ.
ಮಾಸಿಕ ರೂ. 9,000ಗಳ ಗೌರವಧನ ಆಧಾರದ ಮೇಲೆ ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹರ್ಲಾಪುರ ಗ್ರಾಮ ಪಂಚಾಯತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಅರ್ಹತೆ ಹೊಂದಿರುವ ವಿಕಲಚೇತನರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು ಇವರಿಂದ ಪಡೆದು ಭರ್ತಿ ಮಾಡಿ ಫೆಬ್ರವರಿ 28ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 8880570833, 0836-2744474.
ಪ್ರಾಜೆಕ್ಟರ್ ಅಸೋಸಿಯೇಟ್ ಹುದ್ದೆಗೆ ಸಂದರ್ಶನ; ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯಲ್ಲಿ ಕುಟುಂಬ ಸಂಪನ್ಮೂಲ ನಿರ್ವಹಣೆ ವಿಭಾಗದಲ್ಲಿ ಪ್ರಾಜೆಕ್ಟರ್ ಅಸೋಸಿಯೇಟ್ ಹುದ್ದೆಯನ್ನು ಒಂದು ವರ್ಷದ ಅವಧಿಗೆ ನೇಮಿಸಿಕೊಳ್ಳಲು ಸಂದರ್ಶನ ಕರೆಯಲಾಗಿದೆ.
ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆಬ್ರವರಿ 28ರಂದು ಬೆಳಗ್ಗೆ 10.30ಕ್ಕೆ ವಿದ್ಯಾಧಿಕಾರಿಗಳ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಕೃಷಿ ವಿಶ್ವವಿದ್ಯಾಲಯ ಧಾರವಾಡ ಕಚೇರಿಯಲ್ಲಿ ಖುದ್ದು ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನಕ್ಕೆ ಬರುವಾಗ ಎರಡು ದೃಡೀಕೃತ ಪ್ರತಿಗಳಿಗೆ ಪಾಸ್‍ಪೋರ್ಟ್ ಅಳತೆಯ ಫೋಟೋಗಳನ್ನುಲಗತ್ತಿಸಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಸಂದರ್ಶನದ ಸಮಯದಲ್ಲಿ ಹಾಜರುಪಡಿಸಬೇಕು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅರ್ಜಿ ನಮೂನೆ ಹಾಗೂ ಅಧಿಸೂಚನೆಯನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್ http://www.uasd.edu ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.












Click it and Unblock the Notifications