• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಹಾಕಿ

|

ಬೆಂಗಳೂರು, ಏಪ್ರಿಲ್ 06; ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಆಸಕ್ತರು ಏಪ್ರಿಲ್ 23ರೊಳಗೆ ಅರ್ಜಿ ಸಲ್ಲಿಸಬೇಕು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದೇವನಹಳ್ಳಿ, ನೆಲಮಂಗಲ ಹಾಗೂ ಹೊಸಕೋಟೆ ತಾಲೂಕುಗಳಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಮಾಡಲಾಗುತ್ತಿದೆ.

NTRO ನೇಮಕಾತಿ 2021: 45 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಕಲಚೇತನರ ಸಮಸ್ಯೆ ಹಾಗೂ ಅಗತ್ಯಗಳನ್ನು ಅರಿತು, ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಗೌರವಧನದ ಆಧಾರದಲ್ಲಿ ನೇಮಕ ಮಾಡಲಾಗುತ್ತದೆ.

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 402 ಹುದ್ದೆ

ದೇವನಹಳ್ಳಿ ತಾಲೂಕಿನ ಮಂಡಿಬೆಲೆ, ಕೊಯಿರಾ, ಜಾಲಿಗೆ, ಕೋರಮಂಗಲ. ನೆಲಮಂಗಲ ತಾಲೂಕಿನ ಅಗಲುಕುಪ್ಪೆ, ಅರೆಬೊಮ್ಮನಹಳ್ಳಿ, ದೊಡ್ಡಬೆಲೆ. ಹೊಸಕೋಟೆ ತಾಲೂಕಿನ ಅನುಗೊಂಡಹಳ್ಳಿ, ದೇವನಗೊಂದಿ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ನಡೆಯಲಿದೆ.

ಇಸ್ರೋ 2021 ನೇಮಕಾತಿ, 24 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಗೌರವಧನ ಮಾಸಿಕ 6,000 ರೂ.ಗಳು. ಅರ್ಜಿ ಸಲ್ಲಿಸುವವರು ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. ಅಂಗವಿಕಲರ ಗುರುತಿನ ಚೀಟಿ ಝರಾಕ್ಸ್ ಪ್ರತಿ ಲಗತ್ತಿಸಬೇಕು, ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತೀರ್ಣರಾದವರಿಗೆ ಆದ್ಯತೆ. ಎಸ್.ಎಸ್.ಎಲ್.ಸಿ. ಯಲ್ಲಿ ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುತ್ತೀರ್ಣರಾದವರನ್ನು ಪರಿಗಣಿಸಲಾಗುವುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು. ಆರೋಗ್ಯವಂತರಾಗಿರಬೇಕು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು. ಪ್ರವಾಸ, ಲೇಖನ ಸಾಮಗ್ರಿ ಹಾಗೂ ಆಡಳಿತ ವೆಚ್ಚಕ್ಕಾಗಿ ರೂ. 150 ನೀಡಲಾಗುತ್ತದೆ. ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್‍ ಪರಿಶೀಲನೆಗೆ ಒಳಪಟ್ಟಿರುತ್ತದೆ.

   Rafale ಯುದ್ಧ ವಿಮಾನದ ಮತ್ತೊಂದು ಕರ್ಮ ಕಾಂಡ ಬಯಲು | Oneindia Kannada

   ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ 3, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-29787442.

   English summary
   Applications invited for the Village Rehabilitation Workers (VRW) post from physically challenged people in Bengaluru Rural district. Candidates can submit applications till April 23, 2021.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X