Get Updates
Get notified of breaking news, exclusive insights, and must-see stories!

ದಾವಣಗೆರೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ , ಏಪ್ರಿಲ್ 07; ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಣಿಗೆರೆ, ಹೆಬ್ಬಳಗೆರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 6,000 ರೂ.ಗಳ ಗೌರವಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 45 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್. ಎಸ್. ಎಲ್. ಸಿ ಉತ್ತೀರ್ಣ/ ಅನುತ್ತೀರ್ಣರಾದ ಆಸಕ್ತ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Apply For Village Rehabilitation Workers Post In Davanagere

ಏಪ್ರಿಲ್ 9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಯಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ. ಸಿ. ಸಿ. 'ಬಿ' ಬ್ಲಾಕ್ ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-263939.

ಅಂಗನವಾಡಿ ಕಾರ್ಯಕರ್ತೆ ಹುದ್ದೆ; ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಒಟ್ಟು 17 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 63 ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇದೆ. ಏಪ್ರಿಲ್ 8 ರಿಂದ ಅರ್ಹರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 7 ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ವಿವರಗಳಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ದಾವಣಗೆರೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-263219, ಹರಿಹರ 08192-241431, ಜಗಳೂರು 08196-227132, ಹೊನ್ನಾಳಿ 08188-251283, ಚನ್ನಗಿರಿ 08189-228010.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+