ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ 320 ಹುದ್ದೆ ಖಾಲಿ ಇದೆ

ಬೆಂಗಳೂರು, ಜೂ.30 : ಕರ್ನಾಟಕ ಕಾರಾಗೃಹಗಳ ಇಲಾಖೆಯಲ್ಲಿ ಖಾಲಿ ಇರುವ 320 ವಾರ್ಡರ್‌ (ವೀಕ್ಷಕ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 28, 2015.

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಕಾರಾಗೃಹ ಇಲಾಖೆ ನೇಮಕಾತಿ ಆದೇಶವನ್ನು ಹೊರಡಿಸಿದ್ದು, ಜೂನ್ 29ರಿಂದ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಿದೆ. [ನೇಮಕಾತಿ ಆದೇಶ ಓದಿ]

jobs

ವಯೋಮಿತಿ : ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ ವಯೋಮಿತಿ 20 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 26 ವರ್ಷ. ಎಸ್‌ಸಿ/ಎಸ್‌ಟಿ/ಪ್ರವರ್ಗ 1/2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 28 ವರ್ಷಗಳು. [ಆರ್ ಬಿಐ ಬೆಂಗಳೂರು ಸೇರಿ 17ನಗರಗಳಲ್ಲಿ 527 ಹುದ್ದೆಗಳು]

ಅರ್ಜಿ ಶುಲ್ಕ : ಸಾಮಾನ್ಯ/2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 250 ರೂ.ಗಳು. ಎಸ್‌ಸಿ/ಎಸ್‌ಟಿ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವನ್ನು ಭರ್ತಿ ಮಾಡಲು ಕೊನೆಯ ದಿನಾಂಕ ಜುಲೈ 29. ಶುಲ್ಕವನ್ನು ಸ್ಟೇಟ್ ಬ್ಯಾಂಕ್‌ ಆಫ್ ಮೈಸೂರು ಶಾಖೆಯಲ್ಲಿ ಪಾವತಿ ಮಾಡಬೇಕಾಗಿದೆ.

ಹೆಚ್ಚಿನ ವಿವರ ಮತ್ತು ಅರ್ಜಿ ಸಲ್ಲಿಸಲು ಕರ್ನಾಟಕ ಕಾರಾಗೃಹಗಳ ಇಲಾಖೆಯ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ. [ವೆಬ್ ಸೈಟ್ ವಿಳಾಸ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+