ಬಳ್ಳಾರಿ; ಕೆಲಸ ಖಾಲಿ ಇದೆ, ಅ. 15ರೊಳಗೆ ಅರ್ಜಿ ಹಾಕಿ
ಬಳ್ಳಾರಿ, ಅಕ್ಟೋಬರ್ 06: ಬಳ್ಳಾರಿಯಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 15ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ಸಂಯುಕ್ತಾಶ್ರಯದಲ್ಲಿ ಯುವಸ್ಪಂದನ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಈ ಯೋಜನೆ ಮೂಲಕ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನದ ಆಧಾರದ ಮೇರೆಗೆ ಯುವ ಪರಿವರ್ತಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸುವ ಯುವಕ ಮತ್ತು ಯುವತಿಯರು ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. 21 ರಿಂದ 35 ವರ್ಷಗಳ ವಯೋಮಿತಿ ಹೊಂದಿರಬೇಕು.
ಅಭ್ಯರ್ಥಿಗಳಿಗೆ ಕನ್ನಡ ಸ್ಪಷ್ಟವಾಗಿ ಮಾತನಾಡಲು ಬರಬೇಕು. ಸಂವಹನ ಕಲೆ ಕೌಶಲ್ಯ ಹೊಂದಿರಬೇಕು ಹಾಗೂ ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 08392-278827, 9110809886 ಸಂಖ್ಯೆಗೆ ಕರೆ ಮಾಡಬಹುದು.
ಅಭ್ಯರ್ಥಿಗಳು ಅರ್ಜಿಗಳನ್ನು ಬಿ. ಡಿ. ಎ. ಎ ಫುಟ್ ಬಾಲ್ ಮೈದಾನದ ಯುವಸ್ಪಂದನ ಕೇಂದ್ರಕ್ಕೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications