ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಸೆ.21ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಸೆಪ್ಟೆಂಬರ್ 15 : ಧಾರವಾಡದಲ್ಲಿ ಖಾಲಿ ಇರುವ ಯುವಪರಿವರ್ತಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 21ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಯುವಜನ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕರ್ನಾಟಕ ಯುವನೀತಿ-2012ರನ್ವಯ ಯುವಜನರನ್ನು ತಲುಪಿ ಯುವಜನರಿಂದಲೇ ನಡೆಸಿ, ಯುವಜನರನ್ನು ಸಬಲೀಕರಣಗೊಳಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕಗೊಳಿಸುವುದು ಈ ಯೋಜನೆಯ ಉದ್ಧೇಶ.

Apply For Yuva Parivartak Jobs In Dharwad

ಅಭ್ಯರ್ಥಿಗಳು ತಮ್ಮ ಸ್ವ ವಿವರಗಳೊಂದಿಗೆ ಯುವಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರ್.ಎನ್. ಶೆಟ್ಟಿ ಕ್ರೀಡಾಂಗಣ, ಧಾರವಾಡ ಇಲ್ಲಿಗೆ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರು ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 9448299673/ 6364428497/ 900674224 ನಂಬರ್‌ಗಳಿಗೆ ಕಛೇರಿ ಸಮಯ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+