• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಾಸನದಲ್ಲಿ ಕೆಲಸ ಖಾಲಿ ಇದೆ; ಸೆ. 28ರ ತನಕ ಅರ್ಜಿ ಹಾಕಿ

|

ಬೆಂಗಳೂರು, ಸೆಪ್ಟೆಂಬರ್ 24: ಹಾಸನದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಕೇಂದ್ರದಲ್ಲಿ ಗೌರವ ಧನದ ಆಧಾರದ ಮೇರೆಗೆ ಯುವ ಪರಿವರ್ತಕರ ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ರಾಜ್ಯ ಯುವ ನೀತಿ 2012ರ ಅನ್ವಯ ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಯುವಸ್ಪಂದನ ಕಾರ್ಯಕ್ರಮ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಂಡಿದೆ.

ಶಿವಮೊಗ್ಗ; ಆಯುಷ್ ಇಲಾಖೆ ನೇಮಕಾತಿ, ಅರ್ಜಿ ಹಾಕಿ

ಯೋಜನೆ ಮೂಲಕ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಯುವ ಪರಿವರ್ತಕರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಸೆಪ್ಟೆಂಬರ್ 28ರ ಸಂಜೆ 5 ಗಂಟೆಯೊಳಗೆ ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.

ಆರೋಗ್ಯ ಇಲಾಖೆ ನೇಮಕಾತಿ; ಅಕ್ಟೋಬರ್ 15ರ ತನಕ ಅರ್ಜಿ ಹಾಕಿ

ಯುವ ಪರಿವರ್ತಕರ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವ ಯುವಕ ಮತ್ತು ಯುವತಿಯರು ಯಾವುದೇ ಪದವಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ ಕನಿಷ್ಠ 21 ಮತ್ತು ಗರಿಷ್ಠ 35.

ಕರ್ನಾಟಕ ಜಾನಪದ ವಿವಿ ನೇಮಕಾತಿ; ಸೆ.30ರ ತನಕ ಅರ್ಜಿ ಹಾಕಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಸ್ಪಷ್ಟವಾಗಿ ಮಾತನಾಡಲು ಬರಬೇಕು. ಸಂವಹನ ಕಲೆ ಕೌಶಲ್ಯ ಹೊಂದಿರಬೇಕು. ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುತ್ತದೆ.

ಆಸಕ್ತರು ತಮ್ಮ ಮೂಲ ದಾಖಲಾತಿಗಳನ್ನು ಸೆಪ್ಟೆಂಬರ್ 28ರ ಸಾಯಂಕಾಲ 5 ಗಂಟೆಯೊಳಗೆ ಖುದ್ದಾಗಿ ಹಾಸನ ಕ್ರೀಡಾಂಗಣದಲ್ಲಿರುವ ಯುವಸ್ಪಂದನ ಕೇಂದ್ರಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08172245056, 6363178374 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

English summary
Applications invited for the Yuva Parivartak jobs in Hassan. Candidates can apply till September 28, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X