ಮೈಸೂರು; ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು, ಮಾರ್ಚ್ 12; ಮೈಸೂರು ಜಿಲ್ಲೆಯಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 18ರೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಅರ್ಜಿಗಳನ್ನು ಸಲ್ಲಿಸಬಹುದು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನಾರೋಗ್ಯ ಸಂಸ್ಥೆ, ನಿಮ್ಹಾನ್ಸ್‌ನ ಎಪಿಡಿಯಾಮಾಲಜಿ ವಿಭಾಗ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ 'ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ' ಮತ್ತು 'ಅನುಷ್ಠಾನ ಯೋಜನೆ'ಯಡಿಯಲ್ಲಿ ಯುವ ಪರಿವರ್ತಕರಾಗಿ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 21 ರಿಂದ 35 ವರ್ಷದೊಳಗಿರಬೇಕು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ, ಹುಮ್ಮಸ್ಸು, ಉತ್ತಮ ಅಂತರ್‍ವ್ಯಕ್ತಿತ್ವ, ಸಂವಹನ ಕೌಶಲ್ಯದ ಜತೆಗೆ ಸಂವಾದ ಕೌಶಲ್ಯ, ಸೇವಾ ಮನೋಭಾವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಲು ಆಸಕ್ತಿಯಿದ್ದು, ಮೈಸೂರು ಜಿಲ್ಲೆಯಲ್ಲಿ ಪ್ರಯಾಣಿಸುವ ಅಭ್ಯರ್ಥಿಗಳು ತಮ್ಮ ಸ್ವವಿವರಗಳನ್ನು ಮತ್ತು ಅಂಕಪಟ್ಟಿಗಳನ್ನು ಮಾರ್ಚ್ 18ರೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೂರವಾಣಿ ಸಂಖ್ಯೆಗಳು 0821-2444922, 9611069973.












Click it and Unblock the Notifications