ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Posted By:
Subscribe to Oneindia Kannada

ಚಾಮರಾಜನಗರ, ಜುಲೈ 27 : ಚಾಮರಾಜನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಜೂನಿಯರ್ ಪ್ರೋಗ್ರಾಮರ್ (ಮಾಹಿತಿ ತಂತ್ರಜ್ಞಾನ ಸಿಬ್ಬಂದಿ) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ಅಥವ ಬಿಎಸ್ಸಿ (ಸಿಎಸ್), ಬಿಸಿಎ, ಎಂಎಸ್ಸಿ (ಸಿಎಸ್) ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು.[ದಕ್ಷಿಣ ಕನ್ನಡದಲ್ಲಿ 35 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ ಇದೆ]

jobs

ವಯೋಮಿತಿ : ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದವರಿಗೆ 35 ವರ್ಷ, ಹಿಂದುಳಿದ ವರ್ಗ/2ಎ/2ಬಿ/ 3ಎ/3ಬಿ ವರ್ಗಕ್ಕೆ ಸೇರಿದವರಾಗಿದ್ದಲ್ಲಿ 38 ವರ್ಷಗಳು. ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ, ಪ್ರವರ್ಗ 1ಕ್ಕೆ ಸೇರಿದವರಿಗೆ 40 ವರ್ಷಗಳು.[KPTCL ನಲ್ಲಿ ಕೆಲಸ ಖಾಲಿ ಇದೆ]

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಉತ್ತಮ ಜ್ಞಾನವುಳ್ಳವರಾಗಿರಬೇಕು. ಅಂಕಪಟ್ಟಿ, ಇತರೆ ಪ್ರಮಾಣ ಪತ್ರಗಳನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನವಾಗಿದೆ.

ಈ ಹಿಂದೆ (ದಿನಾಂಕ 6/4/2016) ಪ್ರಕಟಣೆ ನೋಡಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

ಅರ್ಜಿ ಸಲ್ಲಿಸಲು ವಿಳಾಸ : ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಠಡಿ ಸಂಖ್ಯೆ 118, ಮೊದಲನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ, ಚಾಮರಾಜನಗರ. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Applications invited for Junior Programmer post at Chamarajanagar district. August 12, 2016 last date for submitting application.
Please Wait while comments are loading...