ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ
ವಿಜಯಪುರ, ಮಾರ್ಚ್ 08: ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಜಯಪುರ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚು ನಕುಲುಗಾರ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಒಟ್ಟು 2 ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 26/3/2021. ಸಾಮಾನ್ಯ ವರ್ಗ 1, ಪ್ರವರ್ಗ -2ಎ 1 ಹುದ್ದೆಗಳನ್ನು ಮೀಸಲಿಡಲಾಗಿದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್. ಎಸ್. ಎಲ್. ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿರಬೇಕು.

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಜೂನಿಯರ್ ಗ್ರೇಡ್ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ದೃಢೀಕರಣ ಪತ್ರ ಹೊಂದಿದ್ದಲ್ಲಿ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಪ್ರವರ್ಗ 2ಎ/ 2ಬಿ/ 3ಎ/ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 38, ಸಾಮಾನ್ಯ ವರ್ಗದವರಿಗೆ 35 ವರ್ಷಗಳು.
ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಮತ್ತು ಪ್ರವರ್ಗ 2ಎ/ 2ಬಿ/ 3ಎ/ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 200 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ -1ರ ಅಭ್ಯರ್ಥಿಗಳಿಗೆ 100 ರೂ. ಶುಲ್ಕವಿದೆ.
ಅಧಿಸೂಚನೆ ಮತ್ತು ಅರ್ಜಿಗಳನ್ನು ಸಲ್ಲಿಸಲು ವಿಳಾಸ https://districts.ecourts.gov.in/vijayapura












Click it and Unblock the Notifications