ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ವಿವರಗಳು

|
Google Oneindia Kannada News

ಬೆಂಗಳೂರು, ಮೇ 26; ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ನಾಗರಿಕ (ಪುರುಷ ಮತ್ತು ಮಹಿಳಾ) ಮಿಕ್ಕುಳಿದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ.

ಆಸಕ್ತ ಅಭ್ಯರ್ಥಿಗಳು 25/5/2021ರಿಂದ 25/6/2021ರ ಸಂಜೆ 6 ಗಂಟೆಯ ತನಕ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು. ಅಧಿಕೃತ ಬ್ಯಾಂಕ್ ಖಾತೆ/ ಅಂಚೆ ಕಚೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 28/6/2021.

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ತಕ್ಷಣ ಅರ್ಜಿ ಹಾಕಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ತಕ್ಷಣ ಅರ್ಜಿ ಹಾಕಿ

ಆಸಕ್ತರು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ ಸೈಟ್‌ನಲ್ಲಿ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ನಿಗದಿತ ದಿನಾಂಕದೊಳಗೆ ಸಲ್ಲಿಸಲಾಗುವ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 23500-47650 ಪ್ರತಿ ತಿಂಗಳು.

ಹಿರಿಯ, ಕಿರಿಯ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ ಹಿರಿಯ, ಕಿರಿಯ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವಾಗ ತೊಂದರೆಗಳು ಎದುರಾದರೆ ಸಹಾಯವಾಣಿ ಸಂಖ್ಯೆ 080-22943346 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ. ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆ ತಾತ್ಕಾಲಿಕವಾಗಿದ್ದು, ಅನಿವಾರ್ಯ ಸಂದರ್ಭದಲ್ಲಿ ಬದಲಾವಣೆಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಮಂಗಳೂರು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೆಬ್ ಸೈಟ್ ವಿಳಾಸ https://recruitment.ksp.gov.in

ಒಟ್ಟು ಹುದ್ದೆಗಳು 3,533

ಒಟ್ಟು ಹುದ್ದೆಗಳು 3,533

ಸರ್ಕಾರದ ರಾಜ್ಯ ಪತ್ರದ ಅನ್ವಯ ಪುರುಷ ಸಾಮಾನ್ಯ 2393, 266 ಹೈದರಾಬಾದ್ ಕರ್ನಾಟಕ ಒಟ್ಟು ಹುದ್ದೆಗಳ ಸಂಖ್ಯೆ 2659. ಮಹಿಳೆ ಸಾಮಾನ್ಯ 799, 75 ಹೈದರಾಬಾದ್ ಕರ್ನಾಟಕ ಒಟ್ಟು ಹುದ್ದೆಗಳು 874. ಒಟ್ಟು 3,533 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸೇವಾ ನಿರತ ಹುದ್ದೆಗಳು 387, ಕ್ರೀಡಾ ಮೀಸಲಾತಿ ಹುದ್ದೆಗಳು 80.

ವಯೋಮಿತಿ ವಿವರಗಳು

ವಯೋಮಿತಿ ವಿವರಗಳು

ಅರ್ಜಿಯನ್ನು ಸಲ್ಲಿಸಲು ನಿಗದಿಡಿಸಿದ ಕೊನೆಯ ದಿನಾಂಕದಂದು ಅಂದರೆ 25/6/201ಕ್ಕೆ ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ (ಚಿತ್ರದಲ್ಲಿದೆ). ಬುಡಕಟ್ಟು ಜನಾಂಗದವರಿಗೆ 30 ವರ್ಷಗಳು, ಮಾಜಿ ಸೈನಿಕರಿಗೆ 3 ವರ್ಷದ ವಿನಾಯಿತಿ ಇದೆ.

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಶುಲ್ಕದ ವಿವರಗಳು

ಒಮ್ಮೆ ಶುಲ್ಕವನ್ನಯ ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ವಾಪಸ್ ಮಾಡುವುದಿಲ್ಲ ಅಥವಾ ಅದನ್ನು ನೇಮಕಾತಿ ನಡೆಸುವ ಇತರೆ ಯಾವುದೇ ಪರೀಕ್ಷೆ ಅಥವ ನೇಮಕಾತಿಗಳಿಗೆ ಹೊಂದಿಸಿಕೊಳ್ಳುವುದಿಲ್ಲ. ಅಭ್ಯರ್ಥಿಗಳು (ಚಿತ್ರದಲ್ಲಿ) ಇರುವ ಮಾಹಿತಿಯಂತೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಶುಲ್ಕವನ್ನು ಆನ್‍ಲೈನ್ /ನಗದು ರೂಪದಲ್ಲಿ ಚಲನ್ ನೊಂದಿಗೆ ಮಾತ್ರ ಬ್ಯಾಂಕ್‍ಗಳಲ್ಲಿ ಮತ್ತು ಅಂಚೆ ಕಚೇರಿಯಲ್ಲಿ ಪಾವತಿಸತಕ್ಕದ್ದು. ಡಿಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

ವಿದ್ಯಾರ್ಹತೆ ವಿವರಗಳು

ವಿದ್ಯಾರ್ಹತೆ ವಿವರಗಳು

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕ ಅಂದರೆ 25/06/2021ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ 25/06/2021ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳ ¼ À
ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುತ್ತದೆ).

Recommended Video

Rahul Dravid ಬಗ್ಗೆ Prithvi Shaw ಹೇಳಿದ್ದೇನು | Oneindia Kannada
ತರಬೇತಿ ವಿವರಗಳು

ತರಬೇತಿ ವಿವರಗಳು

ನೇಮಕಾತಿ ಹೊಂದಿದ ಅಭ್ಯರ್ಥಿಗಳು ಡಿಜಿ ಮತ್ತು ಐಜಿಪಿ ರವರು ಕಾಲ ಕಾಲಕ್ಕೆ ನಿರ್ದಿಷ್ಟ ಪಡಿಸಿದ ಪೊಲೀಸ್ ತರಬೇತಿ ಶಾಲೆಗಳಲ್ಲಿ ಮೂಲ ತರಬೇತಿಯನ್ನು ಪಡೆಯಬೇಕು. ತರಬೇತಿಯಲ್ಲಿ ನಿಗದಿಪಡಿಸಿದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು. ಅನುತ್ತೀರ್ಣರಾದ ಅಭ್ಯರ್ಥಿಗಳನ್ನು ಸೇವೆಯಿಂದ ವಜಾಗೊಳಿಸಲಾಗುವುದು. ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಆರು ತಿಂಗಳು ಖಾಯಂ ಪೂರ್ವ ಅವಧಿಯಲ್ಲಿ ಇರುತ್ತಾರೆ.

English summary
Karnataka State Police invited applications for the post of constable (civil). Eligible and interested candidates can apply online till 25/6/2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X