ಶಿವಮೊಗ್ಗ; ಅಕ್ಟೋಬರ್ 17ರಂದು ಅಪ್ರೆಂಟಿಸ್ ಮೇಳ
ಶಿವಮೊಗ್ಗ, ಅಕ್ಟೋಬರ್ 16; ಶಿವಮೊಗ್ಗದಲ್ಲಿ ಸೋಮವಾರ ಜಿಲ್ಲಾ ಮಟ್ಟದ ರಾಷ್ಟ್ರೀಯ ಶಿಶಿಕ್ಷು (ಅಪ್ರೆಂಟಿಸ್) ಮೇಳ ಆಯೋಜನೆ ಮಾಡಲಾಗಿದೆ. ನೇಮಕಗೊಂಡ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರವನ್ನು ನೀಡಲಿದ್ದಾರೆ.
ಶಿವಮೊಗ್ಗ ತಾಲೂಕಿನ ಗಾಜನೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) 17/10/2022 ರಂದು ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಶಿಶಿಕ್ಷು ಮೇಳ ಆಯೋಜಿಸಿದೆ.

ಈ ಮೇಳದಲ್ಲಿ ಜಿಲ್ಲೆಯ 9 ಸರ್ಕಾರಿ, 6 ಅನುದಾನಿತ ಹಾಗೂ 29 ಖಾಸಗಿ ಐಟಿಐಗಳಲ್ಲಿ ಉತ್ತೀರ್ಣರಾದ ಮತ್ತು ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವವರು ಆನ್‍ಲೈನ್ ನೋಂದಣಿ ಮಾಡಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಅಪ್ರೆಂಟಿಶಿಪ್ ನೋಂದಾಯಿತ ಎಲ್ಲಾ ಕಂಪನಿಯಗಳು ಶಿಶಿಕ್ಷು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲಿವೆ. ನೇಮಕಾತಿ ಹೊಂದಿರುವವರಿಗೆ ಸ್ಥಳದಲ್ಲಿ ನೇಮಕಾತಿ ಪತ್ರವನ್ನು ನೀಡಲಿದ್ದಾರೆ.
ತರಬೇತಿಗೆ ಅರ್ಜಿ ಆಹ್ವಾನ; ಕರ್ನಾಟಕ ಸರ್ಕಾರದ ಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಯಡಿಯಲ್ಲಿ ಯುವಪರಿವರ್ತಕರ ಹಾಗೂ ಯುವ ಸಮಾಲೋಚಕರ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯುವ ಸಮಾಲೋಚಕರು (ಮಹಿಳೆ) 1, ಯುವ ಪರಿವರ್ತಕರು (ಮಹಿಳೆ) 1, ಯುವ ಪರಿವರ್ತಕರು (ಪುರುಷ) 3 ಸ್ಥಾನಗಳಿಗೆ ಯಾವುದೇ ಪದವಿ ಹಾಗೂ ಮೇಲ್ಪಟ್ಟ ಕನಿಷ್ಠ 21 ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳು ಅದೇ ಜಿಲ್ಲೆಯಲ್ಲಿ ವಾಸಿಸುತ್ತಿರಬೇಕು. ಆಯ್ಕೆಯಾಗುವ ಯುವ ಪರಿವರ್ತಕರು ಹೊನ್ನಾಳಿ, ನ್ಯಾಮತಿ, ಜಗಳೂರು, ಚನ್ನಗಿರಿ ಮತ್ತು ಹರಿಹರ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸಬೇಕು.
ಸ್ಥಳೀಯ ಭಾಷೆ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವವರು. ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸನ್ನು ಮತ್ತು ಉತ್ತಮ ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು. ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಇಲ್ಲಿಗೆ ಅಥವಾ ದೂರವಾಣಿ ಸಂಖ್ಯೆ 08192-237480, 9008343253ಗೆ ಕರೆ ಮಾಡಬಹುದಾಗಿದೆ.












Click it and Unblock the Notifications