ಕೊಪ್ಪಳ; ಮಾ. 31ರಂದು ಹನಮಸಾಗರದಲ್ಲಿ ಅಪ್ರೆಂಟೀಸ್‌ಶಿಪ್ ಮೇಳ

ಕೊಪ್ಪಳ , ಮಾರ್ಚ್ 28; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಹನಮಸಾಗರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಬೆಂಗಳೂರಿನ ಬಿಡದಿ ಕಾರು ಉತ್ಪಾದನಾ ಘಟಕದ ಸಹಯೋಗದಲ್ಲಿ ಅಪ್ರೆಂಟೀಸ್‌ಶಿಪ್ ಮೇಳ ಹಮ್ಮಿಕೊಳ್ಳಲಾಗಿದೆ. 18 ರಿಂದ 24 ವಯೋಮಿತಿಯ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಮಾರ್ಚ್ 31ರಂದು 9.30ಕ್ಕೆ ಹನುಮಸಾಗರ ಐಟಿಐ ಕಾಲೇಜಿನಲ್ಲಿ ಅಪ್ರೆಂಟೀಸ್‌ಶಿಪ್ ಮೇಳ ಹಮ್ಮಿಕೊಳ್ಳಲಾಗಿದೆ. ಈ ಅಪ್ರೆಂಟೀಸ್‌ಶಿಪ್ ಮೇಳಕ್ಕೆ 18 ರಿಂದ 24 ವಯೋಮಿತಿ ಹೊಂದಿರುವ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ಎಸ್. ಎಸ್. ಎಲ್. ಸಿ. ಮೂಲ ಅಂಕಪಟ್ಟಿ, ಐಟಿಐ ಮೂಲ ಅಂಕಪಟ್ಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಕೋವಿಡ್ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಮತ್ತು ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಹಾಜರಾಗಬೇಕು.

Apprenticeship Mela At Koppal Hanumasagar ITI College On March 31

ಆಸಕ್ತತು ಹೆಚ್ಚಿನ ಮಾಹಿತಿಗಾಗಿ 7259824287, 9902679477 ಅಥವಾ 9845513016 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಹನಮಸಾಗರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಧಾರವಾಡದ ಕಲಘಟಗಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ 2022-23ನೇ ಸಾಲಿನ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆ ಹಾಗೂ 26 ಅಂಗನವಾಡಿ ಸಹಾಯಕಿಯರನ್ನು ಹುದ್ದೆಗಳಿಗೆ ಆಯ್ಕೆ ಮಾಡಲು ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕಲಘಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಮಾರ್ಚ್ 27ರಿಂದ ಏಪ್ರಿಲ್ 25 ರೊಳಗಾಗಿ ಕಲಘಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 08370-284532.

Apprenticeship Mela At Koppal Hanumasagar ITI College On March 31

ಕುಂದಗೋಳದ ವ್ಯಾಪ್ತಿ; ಶಿಶು ಅಭಿವೃದ್ಧಿ ಯೋಜನೆ ಕುಂದಗೋಳ ತಾಲೂಕ ವ್ಯಾಪ್ತಿಯ 2022-23ನೇ ಸಾಲಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆ ಮಾಡಲು ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕುಂದಗೋಳ ತಾಲೂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು, ಏಪ್ರಿಲ್ 22ರೊಳಗೆ ಸಲ್ಲಿಸಬೇಕು.

ಅರ್ಜಿಗಳನ್ನು ಕುಂದಗೋಳ ತಾಲೂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 08304-290561.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+