ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್ 17ರಂದು ಕೊಪ್ಪಳದಲ್ಲಿ ಅಪ್ರೆಂಟಿಶಿಪ್ ಮೇಳ

|
Google Oneindia Kannada News

ಕೊಪ್ಪಳ, ಅಕ್ಟೋಬರ್ 14; ಕೊಪ್ಪಳ ಜಿಲ್ಲೆಯ ಕುಕನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಅಪ್ರೆಂಟಿಶಿಪ್ ಮೇಳವನ್ನು ಅಕ್ಟೋಬರ್ 17ರಂದು ಆಯೋಜನೆ ಮಾಡಿದೆ. 18 ರಿಂದ 23 ವರ್ಷ ವಯೋಮಿತಿಯ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಕುಕನೂರಿನ ಗುದ್ನೆಪ್ಪನ ಮಠದಲ್ಲಿ ಅಪ್ರೆಂಟಿಶಿಪ್ ಮೇಳ ಬೆಳಗ್ಗೆ 9 ಗಂಟೆಗೆ ಆರಂಭವಾಗಲಿದೆ.
ಈ ಮೇಳದಲ್ಲಿ ಜಿಲ್ಲೆಯ ಹಾಗೂ ಬೆಂಗಳೂರಿನ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; 1137 ಹುದ್ದೆಗಳು ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; 1137 ಹುದ್ದೆಗಳು

ಕೊಪ್ಪಳ ಜಿಲ್ಲೆಯ 18 ರಿಂದ 23 ವರ್ಷ ವಯೋಮಾನದ ಐಟಿಐ ಉತ್ತೀರ್ಣರಾದ ಎಲ್ಲ ವೃತ್ತಿಗಳ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದದೆ. ಆಸಕ್ತರು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳ 1 ಸೆಟ್ ಝೆರಾಕ್ಸ್ ಪ್ರತಿಗಳು, 2 ಫೋಟೋ ಮತ್ತು ರೆಸ್ಯೂಲ್ ಪ್ರತಿಯೊಂದಿಗೆ ಹಾಜರಾಗಬೇಕು.

ಕೊಪ್ಪಳ; ಅಕ್ಟೋಬರ್ 15ರಂದು ಮಿನಿ ಉದ್ಯೋಗ ಮೇಳ ಕೊಪ್ಪಳ; ಅಕ್ಟೋಬರ್ 15ರಂದು ಮಿನಿ ಉದ್ಯೋಗ ಮೇಳ

Apprenticeship Mela In Koppal On October 17th

ಕಂಪನಿಗಳನ್ನು ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 13 ರಿಂದ 15,000 ರೂ. ಸ್ಟೈಫಂಡ್‌ ನೀಡಲಾಗುತ್ತದೆ.

ಕಲಬುರಗಿ; ಕೆಲಸ ಖಾಲಿ ಇದೆ ಅಕ್ಟೋಬರ್ 15ರೊಳಗೆ ಅರ್ಜಿ ಹಾಕಿಕಲಬುರಗಿ; ಕೆಲಸ ಖಾಲಿ ಇದೆ ಅಕ್ಟೋಬರ್ 15ರೊಳಗೆ ಅರ್ಜಿ ಹಾಕಿ

ಆಸಕ್ತ, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9964247098, 9980715718, 8618952961 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಶಿವಮೊಗ್ಗದಲ್ಲಿ ಸಂದರ್ಶನ; ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳ ಗುತ್ತಿಗೆ ಆಧಾರಿತ ನೇಮಕಾತಿಗಾಗಿ ಅಕ್ಟೋಬರ್ 17ರಂದು ಸಂದರ್ಶನ ಆಯೋಜನೆ ಮಾಡಲಾಗಿದೆ.

ಪಶುವೈದ್ಯಕೀಯ ಸೂಕ್ಷ್ಮಜೀವಾಣು ಶಾಸ್ತ್ರ ವಿಭಾಗ ಹುದ್ದೆ 1, ಪ್ರಾಣಿ ಅನುವಂಶೀಯತೆ ಮತ್ತು ತಳಿಶಾಸ್ತ್ರ ವಿಭಾಗ ಹುದ್ದೆ 1, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ಶಾಸ್ತ್ರವಿಭಾಗದ ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ ಹುದ್ದೆ 1 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯನ್ವಯ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಗೊಂಡ ಅಭ್ಯರ್ಥಿಗಳಿಗೆ 57000 ರೂ. ತಿಂಗಳ ವೇತನ ನೀಡಲಾಗುತ್ತದೆ.

ನೇರ ಸಂದರ್ಶನ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ಅಕ್ಟೋಬರ್ 17ರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ www.kvafsu.edu.in ಕ್ಲಿಕ್ ಮಾಡಿ.

English summary
In Koppal apprenticeship mela organized on October 17th for ITI students. 18 to 23 age group candidates can attend mela.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X