ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿ; ನವೆಂಬರ್ 18ರಂದು ಅಪ್ರೆಂಟಿಶಿಪ್‌ಗೆ ಆಯ್ಕೆ

|
Google Oneindia Kannada News

ಕಲಬುರಗಿ, ನವೆಂಬರ್ 18; ಪುಣೆಯ ಫಿಯೆಟ್ ಇಂಡಿಯಾ ಆಟೋಮೊಬೈಲ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಬಳ್ಳಾರಿಯ ಜಿಂದಾಲ್ ಸ್ಟೀಲ್ ವರ್ಕ್ಸ್‌ ಅಪ್ರೆಂಟಿಶಿಪ್ ತರಬೇತಿ ಹಾಗೂ ತಾತ್ಕಾಲಿಕ ಹುದ್ದೆಗಳಿಗೆ ನೇಮಕಾತಿಯನ್ನು ಕಲಬುರಗಿಯಲ್ಲಿ ಮಾಡಿಕೊಳ್ಳಲಿದೆ.

ನವೆಂಬರ್ 18ರ ಗುರುವಾರ ಬೆಳಗ್ಗೆ 10 ಗಂಟೆಗೆ ಕಲಬುರಗಿ ಸರ್ಕಾರಿ (ಪುರುಷ) ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಪ್ಪಳ, ಮೈಸೂರಿನಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಅರ್ಜಿ ಹಾಕಿಕೊಪ್ಪಳ, ಮೈಸೂರಿನಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಅರ್ಜಿ ಹಾಕಿ

ಫಿಟ್ಟರ್, ಎಲೆಕ್ಟ್ರಿಶಿಯನ್, ಡಿಸೇಲ್ ಮೆಕ್ಯಾನಿಕ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಐಸಿಟಿಎಸ್‍ಎಮ್, ಎಂಎಂವಿ., ಟರ್ನನ್ ಆಂಡ್ ವೆಲ್ಡರ್ ಐಟಿಐ ವೃತ್ತಿಗಳಲ್ಲಿ ಪಾಸಾದ ಅಭ್ಯರ್ಥಿಗಳು ಈ ಅಪ್ರೆಂಟಿಶಿಪ್ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹಾಸನದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಹಾಕಿ ಹಾಸನದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಹಾಕಿ

Apprenticeship Selection In Kalaburagi On November 18

ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ. ಹಾಗೂ ಐ. ಟಿ. ಐ ಪಾಸಾದ ಅಂಕಪಟ್ಟಿ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ ಮತ್ತು ಇತ್ತೀಚಿನ ಎರಡು ಭಾವಚಿತ್ರದೊಂದಿಗೆ ಹಾಜರಾಗಬೇಕು.

ಬಿಎಸ್‌ಎನ್‌ಎಲ್ ನೇಮಕಾತಿ; ನ.20ರ ತನಕ ಅರ್ಜಿ ಹಾಕಿ ಬಿಎಸ್‌ಎನ್‌ಎಲ್ ನೇಮಕಾತಿ; ನ.20ರ ತನಕ ಅರ್ಜಿ ಹಾಕಿ

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸೂಚನಾ ಫಲಕವನ್ನು ನೋಡಬೇಕೆಂದು ಮನವಿ ಮಾಡಲಾಗಿದೆ.

ಮಧ್ಯವರ್ತಿಗಳಿಂದ ಎಚ್ಚರವಾಗಿರಿ; ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ 62 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡುವ ಪ್ರಕ್ರಿಯೆಯು ಜಾರಿಯಲ್ಲಿದೆ.

ಕೆಲವು ಅನಾಮಧೇಯ ವ್ಯಕ್ತಿಗಳು/ ಮಧ್ಯವರ್ತಿಗಳು ಅಂಗನವಾಡಿ ಸಹಾಯಕಿ ಹುದ್ದೆಗೆ ನೇಮಕ ಮಾಡಿಸುವುದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಂದ ಹಣಕ್ಕಾಗಿ ಬೇಡಿಕೆ ಇಡುತ್ತಿರುವುದು ಬೆಳಕಿಗೆ ಬಂದಿದೆ.

ಆದ್ದರಿಂದ ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳಿಂದ ಮೋಸ ಹೋಗದಂತೆ ಎಚ್ಚರ ವಹಿಸಬೇಕೆಂದು ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮನವಿ ಮಾಡಿದ್ದಾರೆ.

ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ 62 ಅಂಗನವಾಡಿ ಸಹಾಯಕಿಯರ ಗೌರವಧನದ ಹುದ್ದೆಗಳ ಆಯ್ಕೆಗಾಗಿ ಸರ್ಕಾರದ ಆದೇಶ, ಮಾರ್ಗಸೂಚಿ ಹಾಗೂ ಮಾನದಂಡಗಳನ್ನು ಗಮನದಲ್ಲಿಟ್ಟುಕೊಂಡು ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ ಅಂಗನವಾಡಿ ಸಹಾಯಕಿ ಹುದ್ದೆ ಆಯ್ಕೆ ಪ್ರಕ್ರಿಯೆ ಜಾರಿಯಲ್ಲಿದ್ದು, ಈ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಹಾಗೂ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳನ್ನೊಳಗೊಂಡಂತೆ ಅಂಗನವಾಡಿ ಕಾರ್ಯಕರ್ತೆ /ಸಹಾಯಕಿರ ಆಯ್ಕೆ ಸಮಿತಿಯಲ್ಲಿ ಸದಸ್ಯರ ಅನುಮೋದನೆಯೊಂದಿಗೆ ನೇಮಕಾತಿ ನಡೆಯಲಿದೆ.

ನೇಮಕಾತಿ ಪಾರದರ್ಶಕತೆಯಿಂದ ನಡೆಯುತ್ತಿದ್ದು, ಅಂಗನವಾಡಿ ಸಹಾಯಕಿ ಹುದ್ದೆಗೆ ಹಣ ನೀಡಿ ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳಿಂದ ಮೋಸ ಹೋಗಬಾರದೆಂದು ತಿಳಿಸಲಾಗಿದೆ.

ಹೆಸರು ನೋಂದಣಿಗೆ ಸೂಚನೆ; ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಪ್ರಾರಂಭಿಸಲು ನವೆಂಬರ್ ತಿಂಗಳಿನಲ್ಲಿ ನಾಲ್ಕನೇ ವಾರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಪುರುಷ ಮತ್ತು ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ಮಹಿಳೆಯರಿಗೆ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು ಮತ್ತು ಮತ್ತಿತರ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ.

Recommended Video

Americaದಿಂದ ಪರಭಕ್ಷಕ Drones ಖರೀದಿಸಲು ಮುಂದಾದ India | Oneindia Kannada

ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ಅರ್ಹ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ 9916006910, 8618797704ಗಳಿಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿಕೊಂಡು ಈ ತರಬೇತಿ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದು.

English summary
Apprenticeship selection in Government Industrial Training Institute (Men) Kalaburagi on November 18, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X