Karnataka Police Recruitment: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 4,115 ಹುದ್ದೆಗಳ ಭರ್ತಿಗೆ ಅನುಮೋದನೆ

Karnataka Police Recruitment: ರಾಜ್ಯ ಪೊಲೀಸ್‌ ಇಲಾಖೆ ಸೇರಬಯಸುವಂತಹವರಿಗೆ ಸರ್ಕಾರ ಗುಡ್‌ ನ್ಯೂಸ್‌ವೊಂದನ್ನು ನೀಡಿದೆ. ಇಲಾಖೆಯಲ್ಲಿ 4,115 ಪೊಲೀಸ್‌ ಕಾನ್ಸ್‌ಟೇಬಲ್‌, PSI ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಹಾಗಾದರೆ ಇದರಲ್ಲಿ ಯಾವ್ಯಾವ ಹದ್ದೆಗಳು ಖಾಲಿಯಿವೆ ಹಾಗೂ ಯಾವ ಸಾಲಿನವು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

4,115 ಹುದ್ದೆಗಳ ಪೈಕಿ 3,500 ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳು ಹಾಗೂ 615 ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿವೆ. 2023-24ನೇ ಸಾಲಿನ ಹಾಗೂ 2022-23ನೇ ಸಾಲಿನಲ್ಲಿ ಭರ್ತಿ ಮಾಡಬೇಕಿದ್ದ, ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿರುವ ಹುದ್ದೆಗಳು ಇವು.

Approval Granted for Recruitment of 4 115 Posts in Police Department

ಹುದ್ದೆಗಳ ವಿವರ

* ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್ / ಡಿಎಆರ್) 2000 ಹುದ್ದೆಗಳು ಇದ್ದು, 2023-24ನೇ ಸಾಲಿನಲ್ಲಿ ಭರ್ತಿ ಮಾಡಬೇಕಿದ್ದ ಹುದ್ದೆಗಳು ಇವಾಗಿವೆ.
* ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (SRPC ) (KSRP) 150 ಹುದ್ದೆಗಳಿದ್ದು, 2023-24ನೇ ಸಾಲಿನಲ್ಲಿ ಭರ್ತಿ ಮಾಡಬೇಕಿದ್ದ ಹುದ್ದೆಗಳು ಇವಾಗಿವೆ.
* ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ 300 ಹುದ್ದೆಗಳಿದ್ದು, 2022-23ನೇ ಸಾಲಿನಲ್ಲಿ ಭರ್ತಿ ಮಾಡಬೇಕಿದ್ದ ಹುದ್ದೆಗಳು ಇವಾಗಿವೆ.
* ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ 300 ಹುದ್ದೆಗಳಿದ್ದು, 2023-24ನೇ ಸಾಲಿನಲ್ಲಿ ಭರ್ತಿ ಮಾಡಬೇಕಿದ್ದ ಹುದ್ದೆಗಳು ಇವಾಗಿವೆ.
* ಡೆಪ್ಯೂಟಿ ಸಬ್‌ ಇನ್ಸ್‌ಪೆಕ್ಟರ್ 15 ಹುದ್ದೆಗಳಿದ್ದು, 2024-25ನೇ ಸಾಲಿನಲ್ಲಿ ಭರ್ತಿ ಮಾಡಬೇಕಿದ್ದ ಹುದ್ದೆಗಳು ಇವಾಗಿವೆ.

ಇನ್ನು ಈ ಮೇಲಿನ ಎಲ್ಲಾ ಹುದ್ದೆಗಳಿಗೆ ಇದೀಗ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಮುಂದಿನ 3 ತಿಂಗಳ ಒಳಗೆ ಅಧಿಸೂಚನೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ಆದರೆ, ನೇಮಕಾತಿ ಜರೂರು ಆದೇಶ ಗೃಹ ಇಲಾಖೆಯಿಂದ ಬಂದಲ್ಲಿ 40 ದಿನಗಳೊಳಗೆ ಸಹ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಯಾವ್ಯಾವ ಹುದ್ದೆಗೆ ವಿದ್ಯಾರ್ಹತೆ ಏನು?

* ಇನ್ನು ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕಾಗುತ್ತದೆ.
* ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (SRPC) (KSRP) ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು.
* ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
* ಪೊಲೀಸ್‌ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ದ್ವಿತೀಯ ಪಿಯುಸಿ ಪಾಸಾಗಿರಬೇಕು.

ವಯೋಮಿತಿ ವಿವರ

ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್/ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ, ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷದವರೆಗೆ ಅರ್ಜಿಗೆ ಅವಕಾಶ ಇರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+