ಕಲಬುರಗಿಯಲ್ಲಿ ಆ.1ರಿಂದ ಸೇನಾ ನೇಮಕಾತಿ

ಕಲಬುರಗಿ, ಜೂ.24 : ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಸೇನಾ ನೇಮಕಾತಿ ಆಗಸ್ಟ್ 1 ರಿಂದ 8ರವರೆಗೆ ಕಲಬುರಗಿಯ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಆಸಕ್ತ ಪುರುಷ ಅಭ್ಯರ್ಥಿಗಳು ಪ್ರಯೋಜನ ಪಡೆಯಬಹುದಾಗಿದೆ.

ಭಾರತೀಯ ಸೇನೆಯಲ್ಲಿ ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಯಲಿದೆ. ಕೊಪ್ಪಳ ಜಿಲ್ಲೆಯ ಅಭ್ಯರ್ಥಿಗಳು ಆಗಸ್ಟ್ 2ರಂದು ಸೋಲ್ಜರ್ ಕ್ಲರ್ಕ್, ಸೋಲ್ಜರ್ ಟೆಕ್ನಿಕಲ್ ಮತ್ತು ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗಳ ನೇಮಕಾತಿಗೆ ಹಾಜರಾಗಬೇಕು. ಆಗಸ್ಟ್‌ 8ರಂದು ಮಾಜಿ ಸೈನಿಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. [ಕನ್ನಡ ಮಾತನಾಡುವವರಿಗೆ ಮಾತ್ರ ಇಲ್ಲಿ ಉದ್ಯೋಗ]

indian army

ಸೋಲ್ಜರ್ ಕ್ಲರ್ಕ್ ಹುದ್ದೆಯ ನೇಮಕಾತಿಗೆ ಆಗಮಿಸುವವರು ಕನಿಷ್ಠ ಪಿಯುಸಿ ಪಾಸಾಗಿರಬೇಕು. ಸೋಲ್ಜರ್ ಟೆಕ್ನಿಕಲ್ ಹುದ್ದೆಗೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಇಂಗ್ಲೀಷ್ ವಿಷಯಗಳಲ್ಲಿ ಶೇ. 45 ಅಂಕಗಳೊಂದಿಗೆ ಪಿಯುಸಿ ಪಾಸಾಗಿರಬೇಕು. ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು. [ಕೊಪ್ಪಳ ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]

ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಗಾಗಿ 0831-2465550 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಅಥವಾ www.zrobangalore.gov.in ವೆಬ್‍ಸೈಟ್‌ಗೆ ಭೇಟಿ ನೀಡಬಹುದು. ನೇಮಕಾತಿ ಸಂಪೂರ್ಣ ಪಾರದರ್ಶಕವಾಗಿದ್ದು, ಯಾವುದೇ ವದಂತಿಗಳಿಗೆ ಅಭ್ಯರ್ಥಿಗಳು ಕಿವಿಗೊಡಬಾರದು ಎಂದು ಮನವಿ ಮಾಡಲಾಗಿದೆ. [ಕಲಬುರಗಿ ರಂಗಾಯಣದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+