ಬಾಗಲಕೋಟೆಯಲ್ಲಿ ಮೊದಲ ಬಾರಿಗೆ ಸೇನಾ ನೇಮಕಾತಿ ರ‍್ಯಾಲಿ

Posted By: Gururaj
Subscribe to Oneindia Kannada

ಬಾಗಲಕೋಟೆ, ನವೆಂಬರ್ 15 : ಬಾಗಲಕೋಟೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದೆ. ಪಾಲ್ಗೊಳ್ಳಲು ಆಸಕ್ತಿ ಹೊಂದಿರುವವರು ನ.20ರಿಂದ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಭಾರತೀಯ ಸೇನೆಯಲ್ಲಿ 90 ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 2018ರ ಜನವರಿ 16 ರಿಂದ 21ರ ತನಕ ನೇಮಕಾತಿ ರ‍್ಯಾಲಿ ನವನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

Army recruitment rally in Bagalkot on January 2018

ನೇಮಕಾತಿ ರ‍್ಯಾಲಿಯಲ್ಲಿ 11 ಜಿಲ್ಲೆಗಳ ಸುಮಾರು 25 ಸಾವಿರ ಅಭ್ಯರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ನವೆಂಬರ್ 20ರಿಂದ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಸೇನಾ ನೇಮಕಾತಿ ರ‍್ಯಾಲಿ ಉಸ್ತುವಾರಿಯನ್ನು ಮಂಗಳೂರಿನ ಸೇನಾ ನೇಮಕಾತಿ ಕಚೇರಿಯ ಕರ್ನಲ್ ಎಂ.ಎ.ರಾಜಮಣ್ಣಾರ್ ವಹಿಸಿಕೊಂಡಿದ್ದಾರೆ. ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಯಾವ ಹುದ್ದೆಗಳಿಗೆ ನೇಮಕಾತಿ : ಸೋಲ್ಜರ್ ಜನರಲ್, ಸೋಲ್ಜರ್ ಟೆಕ್ನೋಲಜಿ, ಸೋಲ್ಜರ್ ಕುಕ್ ಮತ್ತು ಎಸ್‌ಕೆಟಿ, ಸೋಲ್ಜರ್ ಟ್ರೇಡ್ಸ್‌ಮನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಎಸ್‌ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳು ರ‍್ಯಾಲಿಯಲ್ಲಿ ಪಾಲ್ಗೊಳ್ಳಬಹುದಾಗಿದೆ. ನವೆಂಬರ್ 20ರಿಂದ ಜನವರಿ 1ರ ತನಕ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
For the first time Indian army recruitment rally organized in Bagalkot district. Rally will beheld form January 16 to 21, 2018 at Navanagar grounds.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ