ಮಡಿಕೇರಿಯಲ್ಲಿ ಸೇನಾ ನೇಮಕಾತಿ; ಹೆಸರು ನೋಂದಣಿ ಮಾಡಿ

ಬೆಂಗಳೂರು, ಸೆಪ್ಟೆಂಬರ್ 18 : ಭಾರತೀಯ ಸೇನಾಪಡೆ ಅಕ್ಟೋಬರ್ 13 ರಿಂದ 18ರ ತನಕ ಮಡಿಕೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸಲಿದೆ. ಆಸಕ್ತರು ಸೆಪ್ಟೆಂಬರ್ 29ರೊಳಗೆ ಹೆಸರು ನೋಂದಣಿ ಮಾಡಿಸಬೇಕಾಗಿದೆ.

ಭಾರತೀಯ ಸೇನಾ ಪಡೆ ಸೋಲ್ಜರ್ ಜನರಲ್ ಡ್ಯೂಟಿ, ಟಿಕ್ನಿಕಲ್, ಕ್ಲರಿಕಲ್, ಎಸ್. ಕೆ. ಟಿ ಹುದ್ದೆಗಳ ನೇಮಕಾತಿಗಾಗಿ ಕೊಡಗು ಜಿಲ್ಲೆಯ ಮಡಿಕೇರಿ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ನೇಮಕಾತಿಯನ್ನು ಆಯೋಜಿಸಿದೆ.

ನೇಮಕಾತಿಯಲ್ಲಿ ಭಾಗವಹಿಸುವವರು ವೆಬ್‌ಸೈಟ್‌ನಲ್ಲಿ ತಮ್ಮ ಹೆಸರನ್ನು ನೋಂದಾವಣೆ ಮಾಡಿಕೊಳ್ಳುವುದು ಕಡ್ಡಾಯ. ಹೆಸರನ್ನು ನೊಂದಾಯಿಸದೆ ನೇಮಕಾತಿಗೆ ಬರುವ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಅವಕಾಶವಿರುವುದಿಲ್ಲ.

jobs

ವಿದ್ಯಾರ್ಹತೆ : ಎಸ್. ಎಸ್. ಎಲ್. ಸಿ, ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ 17 ರಿಂದ 21 ವರ್ಷ ಮತ್ತು 17 ರಿಂದ 23 ವರ್ಷ ವಯೋಮಿತಿಯ ಅಭ್ಯರ್ಥಿಗಳು ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ನಿರುದ್ಯೋಗಿ ಯುವಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಮನವಿ ಮಾಡಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಉದ್ಯೋಗ ವಿನಿಮಯ ಕಚೇರಿಯಿಂದ ಅಗತ್ಯ ಸಹಕಾರ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಿರುವ/ಸಲ್ಲಿಸುವ ಅಭ್ಯರ್ಥಿಗಳಿಗಾಗಿ ಲಿಖಿತ ಪರೀಕ್ಷಾ ಪೂರ್ವ ಭಾವಿ ತರಬೇತಿ ಶಿಬಿರವನ್ನು ಉಚಿತವಾಗಿ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆ.20 ರಿಂದ ಹಮ್ಮಿಕೊಳ್ಳಲಾಗುವುದು. ತರಬೇತಿಗೆ ಹಾಜರಾಗುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 080 25596517, 08172-268374 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ, ನೋಂದಣಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+