ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ; ಜೂನ್ 30ರಂದು ಉದ್ಯೋಗ ಮೇಳ

|
Google Oneindia Kannada News

ಶಿವಮೊಗ್ಗ, ಜೂನ್ 28; ಶಿವಮೊಗ್ಗದಲ್ಲಿ ಜೂನ್ 30ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಡಿವಿಎಸ್ ಕಲಾ-ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

 ಬೆಂಗಳೂರಿನ ಐಕಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಬೆಂಗಳೂರಿನ ಐಕಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜೂನ್ 30ರ ಗುರುವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆ ತನಕ ಉದ್ಯೋಗ ಮೇಳ ನಡೆಯಲಿದೆ. ಎಸ್‌ಎಲ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್-ಸಿ 155 ಹುದ್ದೆಗಳು: ಅರ್ಜಿ ಸಲ್ಲಿಸಿಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್-ಸಿ 155 ಹುದ್ದೆಗಳು: ಅರ್ಜಿ ಸಲ್ಲಿಸಿ

Attend Job Fair In Shivamogga DVS College On June 30th

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು ಈ ಲಿಂಕ್ ಬಳಕೆ ಮಾಡಿಕೊಂಡು ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್ ಎಚ್. ಎಂ. ಹೇಳಿದ್ದಾರೆ. ಲಿಂಕ್ https://forms.gle/N8bXFEiVrJLHQ1hU9

ಉದ್ಯೋಗ ಮೇಳ ನಡೆಯುವ ಸ್ಥಳ; ಡಿ. ವಿ. ಎಸ್. ಕಾಲೇಜು, ಗಾಂಧಿಪಾರ್ಕ್ ಎದುರು, ಶಿವಮೊಗ್ಗ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08182 - 222646, 9448562530 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಎಸ್‌ಬಿಐ ನೇಮಕಾತಿ; ಬೆಂಗಳೂರಲ್ಲಿ 23 ಹುದ್ದೆಗೆ ಅರ್ಜಿ ಹಾಕಿ ಎಸ್‌ಬಿಐ ನೇಮಕಾತಿ; ಬೆಂಗಳೂರಲ್ಲಿ 23 ಹುದ್ದೆಗೆ ಅರ್ಜಿ ಹಾಕಿ

ಉದ್ಯೋಗ ಯೋಜನೆಗೆ ಅರ್ಜಿ ಆಹ್ವಾನ; ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2022-23ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಬಹುದಾದ ತರಬೇತಿ, ಸ್ವಯಂ ಉದ್ಯೋಗ ಸ್ವಾವಲಂಬಿ ಮಾರಾಟ ಮಳಿಗೆ, ಸಂಚಾರ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಯೋಜನೆ ಹಾಗೂ ಇತರೆ ಯೋಜನೆಗಳಾಗಿ ಅರ್ಜಿ ಆಹ್ವಾನಿಸಿದೆ.

ಅರ್ಹ, ಆಸಕ್ತರು ನಿಗಮದ ವೆಬ್‍ಸೈಟ್ https://lidkar.com ಅಥವಾ ಸುವಿಧಾ ಜಾಲತಾಣ http://suvidha.karnataka.gov.in ಮೂಲಕ 30/07/2022 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9480886268 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಸಾಲ ಸೌಲಭ್ಯಕ್ಕೆ ಅರ್ಜಿ ಹಾಕಿ; ಶಿಶು ಅಭಿವೃದ್ದಿ ಯೋಜನೆ ವತಿಯಿಂದ ಉದ್ಯೋಗಿನಿ ಯೋಜನೆಯಡಿ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಂದ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 23 ಕೊನೆಯ ದಿನ.

ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ನೀಡಲಾಗುತ್ತದೆ. ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ (ಹಂದಿ, ಆಡು, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿಪಾರ್ಲರ್, ಟೈಲರಿಂಗ್, ವ್ಯಾಪಾರ, ಮತ್ತಿತರ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಯೋಜನೆ ಜಾರಿಗೊಳಿಸಲಾಗಿದೆ.

ಅರ್ಜಿ ಸಲ್ಲಿಸುವವರು 18 ರಿಂದ 55 ವರ್ಷ ವಯೋಮಿತಿಗೊಳಪಟ್ಟಿರಬೇಕು. ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಅವಕಾಶ. ಪರಿಶಿಷ್ಟ ಜಾತಿ/ ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ ರೂ.1 ಲಕ್ಷದಿಂದ ರೂ. 3 ಲಕ್ಷ ಹಾಗೂ ಶೇ.50 ಸಹಾಯಧನ ನೀಡಲಾಗುವುದು. ಕುಟುಂಬದ ವಾರ್ಷಿಕ ಆದಾಯ ರೂ. 2 ಲಕ್ಷಕ್ಕೆ ಮೀರಿರಬಾರದು.

ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ (ಪರಿಶಿಷ್ಟ ಜಾತಿ/ ಪಂಗಡದ) ವರೆಗೆ ಮಾತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಪೋಟೋವನ್ನು ಅರ್ಜಿಯ ಜೊತೆ ಸಲ್ಲಿಸಬೇಕು.

ಇತರೆ ಮಹಿಳೆಯರಿಗೆ ಘಟಕ ವೆಚ್ಚ ರೂ. 1 ಲಕ್ಷ ದಿಂದ ರೂ. 3 ಲಕ್ಷ ಹಾಗೂ ಶೇ.30 ಸಹಾಯಧನ ನೀಡಲಾಗುವುದು. ಕುಟುಂಬದ ವಾರ್ಷಿಕ ಆದಾಯ ರೂ.150000ಕ್ಕೆ ಮೀರಿರಬಾರದು. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿ ಜೊತೆ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-295087.

English summary
Job fair at Shivamogga DVS College on June 30th. SSLC, PUC, Diploma degree and master degree passed candidates can attend job fair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X