ವಿವಿಧ ಇಲಾಖೆಗಳಲ್ಲಿರುವ ಬ್ಯಾಗ್‌ಲಾಗ್ ಹುದ್ದೆಗಳ ಭರ್ತಿಗೆ ಸೂಚನೆ
ಬೆಂಗಳೂರು, ಡಿಸೆಂಬರ್ 28 : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಗ್‌ಲಾಗ್) ಹುದ್ದೆಗಳನ್ನು ಒಂದು ತಿಂಗಳವೊಳಗೆ ಭರ್ತಿ ಮಾಡಲು ಸೂಚನೆ ನೀಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಆರ್) ನೇಮಕಾತಿ ಪ್ರಾಧಿಕಾರಗಳಿಗೆ ಬ್ಯಾಗ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಸೂಚನೆ ನೀಡಿದೆ. ಹುದ್ದೆಗಳನ್ನು ಭರ್ತಿ ಮಾಡದಿದ್ದರೆ ಅಥವ ನಿಯಮ ಉಲ್ಲಂಘಿಸಿ ನೇಮಕಾತಿ ಮಾಡಿದರೆ ಅಂಥ ಅಧಿಕಾರಿಗೆ 1000 ದಂಡ ಮತ್ತು 6 ತಿಂಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.
ಬ್ಯಾಗ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡದೆ, ಮೀಸಲಾತಿ ನಿಯಮ ಉಲ್ಲಂಘಿಸಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳು ಮತ್ತು ಸಹಕಾರ ಸಂಸ್ಥೆಗಳಿಗೆ ಅನುದಾನ ತಡೆ ಹಿಡಿಯಲು ಉನ್ನತ ಶಿಕ್ಷಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಸಹಕಾರ ಇಲಾಖೆಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಬ್ಯಾಕ್‌ಲಾಗ್ ಹುದ್ದೆಗಳ ಬಗ್ಗೆ ನಿಖರ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ದೃಢೀಕರಿಸಿ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಈ ವರೆಗೂ ರೋಸ್ಟರ್ ಮತ್ತು ಖಾಲಿ ಹುದ್ದೆ ರಿಜಿಸ್ಟರ್ ಸಲ್ಲಿಸದ ಇಲಾಖೆಗಳು ತಕ್ಷಣ ಅದನ್ನು ಸಲ್ಲಿಸಬೇಕು.
ಈ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಜಾಹೀರಾತನ್ನು ರಾಜ್ಯಮಟ್ಟದ ಎರಡು ಪತ್ರಿಕೆಗಳಲ್ಲಿ ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.












Click it and Unblock the Notifications