ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ 28 ಹುದ್ದೆಗಳು ಖಾಲಿ ಇವೆ
ಬೆಂಗಳೂರು, ಜನವರಿ 16 : ಬಾಗಲಕೋಟೆ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 11/2/2019 ಕೊನೆಯ ದಿನವಾಗಿದೆ.
ಬೆರಳಚ್ಚುಗಾರ 12, ಬೆರಳಚ್ಚು ನಕಲುಗಾರ 3, ಸಿಪಾಯಿ 13 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕಗಳನ್ನು ಪಾವತಿ ಮಾಡಲು 14/2/2019 ಕೊನೆಯ ದಿನ.
ವಿದ್ಯಾರ್ಹತೆ ವಿವರಗಳು
* ಬೆರಳಚ್ಚುಗಾರ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾದ ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವ ತತ್ಸಮಾನ ವಿದ್ಯಾರ್ಹತೆ.

* ಬೆರಳಚ್ಚು ನಕಲುಗಾರ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವ ತತ್ಸಮಾನ ವಿದ್ಯಾರ್ಹತೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾದ ಕಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವ ತತ್ಸಮಾನ ವಿದ್ಯಾರ್ಹತೆ.
* ಸಿಪಾಯಿ : 7ನೇ ತರಗತಿಯಲ್ಲಿ ಉತ್ತೀರ್ಣ. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
ವಯೋಮಿತಿ ವಿವರ : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಈ ಕೆಳಕಂಡ ವಯೋಮಿತಿಯನ್ನು ಹೊಂದಿರಬೇಕು. ಕನಿಷ್ಠ ವಯೋಮಿತಿ 18 ವರ್ಷ.
* ಸಾಮಾನ್ಯ ವರ್ಗ 35, ಪ್ರವರ್ಗ 2ಎ/ 2ಬಿ/3ಎ/3ಬಿ 38, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ-1 40 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕಗಳು : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂ. ಪ್ರವರ್ಗ-2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 150 ರೂ. ಶುಲ್ಕ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದ ಬಳಿಕ ಶುಲ್ಕ ಪಾವತಿಸುವ ಸಲುವಾಗಿ Home page ನಲ್ಲಿ ನೀಡಲಾದ Make Payment ಆಯ್ಕೆಯ ಮೂಲಕ ಶುಲ್ಕವನ್ನು ಪಾವತಿ ಮಾಡಬೇಕು.
ಅರ್ಜಿಗಳನ್ನು ಸಲ್ಲಿಸಲು ವಿಳಾಸ












Click it and Unblock the Notifications