ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ನವೆಂಬರ್ 21 : ಬಾಗಲಕೋಟೆ ಜಿಲ್ಲಾ ನ್ಯಾಯಾಲಯ 20 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 15 ಡಿಸೆಂಬರ್ 2018 ಕೊನೆಯ ದಿನವಾಗಿದೆ.
ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ (Stenographers) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಒಟ್ಟು 20 ಹುದ್ದೆಗಳಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಎಸ್‌ಎಸ್‌ಎಲ್‌ಸಿ ಪಾಸ್ ಆಗಿರುವ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಹಾಗೂ ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಓಬಿಸಿ ಅಭ್ಯರ್ಥಿಗಳಿಗೆ 3, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 220 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 70 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 27650-52650 ರೂ. ವೇತನ ಶ್ರೇಣಿ ನಿಗದಿ ಮಾಡಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು, ನೇಮಕಾತಿ ಆದೇಶದಲ್ಲಿ ನೀಡಿದ ವಿಳಾಸಕ್ಕೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications