ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಗಲಕೋಟೆಯಲ್ಲಿ ಕೆಲಸ ಖಾಲಿ ಇದೆ; ಏ. 21ರೊಳಗೆ ಅರ್ಜಿ ಹಾಕಿ

|
Google Oneindia Kannada News

ಬಾಗಲಕೋಟೆ, ಮಾರ್ಚ್ 22; ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಬಾಗಲಕೋಟೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 21/4/2022 ಕೊನೆಯ ದಿನವಾಗಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ವಿವಿಧ ನ್ಯಾಯಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್-3, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ, ಆದೇಶ ಜಾರಿಕಾರ ಮತ್ತು ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಜಿ ಹಾಕಿ; ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೇಮಕಾತಿ ಅರ್ಜಿ ಹಾಕಿ; ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೇಮಕಾತಿ

ಶೀಘ್ರಲಿಪಿಗಾರರು ಗ್ರೇಡ್-3 13, ಬೆರಳಚ್ಚುಗಾರ 2, ಬೆರಳಚ್ಚು-ನಕಲುಗಾರ 1, ಆದೇಶ ಜಾರಿಕಾರ 1 ಮತ್ತು ಸಿಪಾಯಿ 37 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

KPSC Recruitment; 410 ಹುದ್ದೆಗಳಿಗೆ ಅರ್ಜಿ ಹಾಕಿ KPSC Recruitment; 410 ಹುದ್ದೆಗಳಿಗೆ ಅರ್ಜಿ ಹಾಕಿ

Bagalkot District Court Recruitment Apply Till April 21st

ವಿದ್ಯಾರ್ಹತೆ ವಿವರಗಳು; ಶೀಘ್ರಲಿಪಿಗಾರರು ಗ್ರೇಡ್-3 ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

KPSC ಮೂಲಕ ಶೀಘ್ರವೇ ಕಾರ್ಮಿಕ ಇಲಾಖೆ ನೇಮಕಾತಿ KPSC ಮೂಲಕ ಶೀಘ್ರವೇ ಕಾರ್ಮಿಕ ಇಲಾಖೆ ನೇಮಕಾತಿ

ಬೆರಳಚ್ಚುಗಾರ ಹುದ್ದೆಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ, ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವ ಸೆಕ್ರೆಟರಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವ ತತ್ಸಮಾನ ವಿದ್ಯಾರ್ಹತೆ ಇರಬೇಕು.

ಬೆರಳಚ್ಚು-ನಕಲುಗಾರ ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾದ ಕಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವ ತತ್ಸಮಾನ ವಿದ್ಯಾರ್ಹತೆ ಇರಬೇಕು.

ಆದೇಶ ಜಾರಿಕಾರ ಹುದ್ದೆಗೆ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಸಿಪಾಯಿ ಹುದ್ದೆಗೆ ಅರ್ಜಿ ಹಾಕುವವರು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಿತಿ ವಿವರ; ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿ ಈ ಕೆಳಕಂಡ ವಯೋಮಿತಿ ಹೊಂದಿರಬೇಕು. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮತಿ 18 ವರ್ಷಗಳು. ಸಾಮಾನ್ಯ ವರ್ಗ 35, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಸರ್ಕಾರಿ ಸೇವೆಯಲ್ಲಿ ಇರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಮತ್ತು ಅಂಗವಿಕಲರಿಗೆ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕಗಳು; ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 300 ರೂ., ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು150 ರೂ. ಅರ್ಜಿ ಶುಲ್ಕ ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಳ್ಳಬೇಕು. ಸರಿಯಾದ ಮಾಹಿತಿ ಇಲ್ಲದ, ಅಪೂರ್ಣ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ವಿಳಾಸ

https://districts.ecourts.gov.in/bagalkot

English summary
Bagalkot district court recruitment; Apply for various post online till 21/4/2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X