ಬಳ್ಳಾರಿ; ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ
ಬಳ್ಳಾರಿ, ನವೆಂಬರ್ 24 : ಕೃಷಿ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಆಹಾರ ತಂತ್ರಜ್ಞಾನ/ ಆಹಾರ ಇಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ/ ಪದವಿಯನ್ನು ಪ್ರತಿಷ್ಠಿತ ರಾಷ್ಟ್ರ/ ಅಂತರ ರಾಷ್ಟ್ರೀಯ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ ಪಡೆದಿರಬೇಕು.
ಕರ್ನಾಟಕ ಅಂಚೆ ವೃತ್ತ ನೇಮಕಾತಿ; 52 ಹುದ್ದೆಗೆ ಅರ್ಜಿ ಹಾಕಿ
ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ 3 ರಿಂದ 5 ವರ್ಷಗಳ ಅನುಭವ ಹೊಂದಿರಬೇಕು.
ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಒಂದು ವೇಳೆ ಆಹಾರ ತಂತ್ರಜ್ಞಾನ ವಿಷಯದಲ್ಲಿ ಅರ್ಹತೆ ಹೊಂದಿರುವ ವ್ಯಕ್ತಿಗಳು ಲಭ್ಯವಾಗದಿದ್ದರೆ, ಆಹಾರ ಸಂಸ್ಕರಣಾ ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ಧಪಡಿಸುವಿಕೆಯಲ್ಲಿ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ವ್ಯಕ್ತಿಗಳನ್ನು ಪರಿಗಣಿಸಲಾಗುತ್ತದೆ.
ನೇಮಕಾತಿ ಸ್ಥಗಿತ; ಹಲವರ ಕೈ ತಪ್ಪಲಿದೆ ಸರ್ಕಾರಿ ಉದ್ಯೋಗ!
ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಶಾರ್ಟ್ ಲಿಸ್ಟ್ ಮಾಡಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿನ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನ ಅವಶ್ಯಕ. ಅರ್ಜಿಗಳನ್ನು ಜಿಲ್ಲಾ ಮಟ್ಟದ ಕೃಷಿ ಇಲಾಖೆಯಲ್ಲಿ ಪಡೆದು ಭರ್ತಿ,ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.