ಬಳ್ಳಾರಿ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ
ಬಳ್ಳಾರಿ, ಜುಲೈ 07 : ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2016ರ ಜುಲೈ 21 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.
3 ಶೀಘ್ರಲಿಪಿಗಾರರು, 3 ಬೆರಳಚ್ಚುಗಾರರು ಹಾಗೂ 1 ಬೆರಳಚ್ಚು ನಕಲುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಅಧಿಸೂಚನೆ ಜೊತೆ ನೀಡಿರುವ ಅರ್ಜಿಯನ್ನು ಕಂಪ್ಯೂಟರ್ ಮೂಲಕ ಅಥವ ಬೆರಳಚ್ಚು ಮಾಡಿ ಎಲ್ಲಾ ಅಂಕಣಗಳನ್ನು ಭರ್ತಿ ಮಾಡಿ ಅಭ್ಯರ್ಥಿಯು ಸಲ್ಲಿಸಬಹುದಾಗಿದೆ. [BMRCL ನಲ್ಲಿ ಕೆಲಸ ಖಾಲಿ ಇದೆ]

ಅರ್ಜಿ ಸಲ್ಲಿಸಲು ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ - 583101. ಜುಲೈ 21ರ ಸಂಜೆ 5 ಗಂಟೆಯೊಳಗೆ ಅರ್ಜಿ ತಲುಪುವಂತೆ ಕಳುಹಿಸಬೇಕು. [ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ ವಿವರ]
ಶೀಘ್ರಲಿಪಿಗಾರರು : ಎಸ್‌ಎಸ್‌ಎಲ್‌ಸಿ/ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ, ಇಂಗ್ಲಿಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಬೆರಳಚ್ಚುಗಾರರು : ಎಸ್‌ಎಸ್‌ಎಲ್‌ಸಿ/ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ, ಇಂಗ್ಲಿಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಬೆರಳಚ್ಚು ನಕಲುಗಾರರು : ಎಸ್‌ಎಸ್‌ಎಲ್‌ಸಿ/ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ, ಇಂಗ್ಲಿಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಅರ್ಜಿ ನಮೂನೆ, ಮೀಸಲಾತಿ ವಿವರ ಸೂಚನೆಗಳು ಮತ್ತು ಹೆಚ್ಚಿನ ವಿವರ http://ecourts.gov.in/india/Karnataka/ballari/recruitment ವೆಬ್‌ಸೈಟ್‌ನಲ್ಲಿ ಲಭ್ಯವಿದೆ.












Click it and Unblock the Notifications