ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿವೆ ಅರ್ಜಿ ಆಹ್ವಾನ
ಬಳ್ಳಾರಿ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಜವಾನರ ಹುದ್ದೆ ಸೇರಿದಂತೆ ಒಟ್ಟು 73 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಬಳ್ಳಾರಿ, ಮಾರ್ಚ್ 28: ಬಳ್ಳಾರಿಯ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಜವಾನರ ಹುದ್ದೆ ಸೇರಿದಂತೆ ಒಟ್ಟು 73 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ಸಂಖ್ಯೆ : 73+
ಸ್ಟೆನೋಗ್ರಾಫರ್ : 07
ಟೈಪಿಸ್ಟ್ : 25
ಪ್ರೊಸೆಸ್ ಸರ್ವರ್ : 11
ಜವಾನ : 30
ವೇತನ ಶ್ರೇಣಿ : 11600-200-12000-250-13000-300-14200-350-15600-400-17200-450-19000-500-21000.ಹಾಗೂ ಇತರೆ ಭತ್ಯೆಗಳು.

ವಿದ್ಯಾರ್ಹತೆ :
ಎಸ್,ಎಸ್,ಎಲ್,ಸಿ. ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಯನ್ನು ಸ್ವೀಕರಿಸಲು ನಿಗದಿಪಡೆಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಸಾಮರ್ಥ್ಯ ಪರೀಕ್ಷೆಯ ಗರಿಷ್ಟ 100 ಅಂಕಗಳನ್ನು ಒಳಗೊಂಡಿದ್ದು ಅದರಲ್ಲಿ ತೇರ್ಗಡೆಯಾಗಲು ಕನಿಷ್ಟ 50 ಅಂಕಗಳನ್ನು ಪಡೆಯಬೇಕು.
ವಯೋಮಿತಿ :
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ -18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗ : 35 ವರ್ಷಗಳು, 2ಎ,2ಬಿ,3ಎ,3ಬಿ. 38 ವರ್ಷಗಳು ಹಾಗೂ ಪ.ಜಾ, ಪ.ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು.
ಅರ್ಜಿ ಶುಲ್ಕ : ಸಾಮಾನ್ಯ ವರ್ಗ, ಪ್ರವರ್ಗ-2ಎ,2ಬಿ,3ಎ,ಮತ್ತು 3ಬಿಗೆ ಸೇರಿದ 250/-ರೂ ಹಾಗೂ ಪರಿಷ್ಟ ಪ, ಜಾ, ಪ. ಪಂ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ.100/-ರೂ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗಾಗಿ ಕ್ಲಿಕ್ ಮಾಡಿ.
Download











Click it and Unblock the Notifications