ಬಳ್ಳಾರಿ: ಗ್ರಾಮ ಕಾಯಕ ಮಿತ್ರ, ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ, ಏ.20: ಬಳ್ಳಾರಿ ತಾಲೂಕಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2020-21ನೇ ಸಾಲಿನಲ್ಲಿ 20 ಸಾವಿರ ಮಾನವ ದಿನಗಳಿಗಿಂತ ಹೆಚ್ಚಿನ ಉದ್ಯೋಗ ಸೃಜನೆ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ ''ಗ್ರಾಮ ಕಾಯಕ ಮಿತ್ರ'' ರನ್ನು ನೇಮಕ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿ ತಾಲೂಕಿನ ಕೊರ್ಲಗುಂದಿ, ಕೊಳಗಲ್ಲು, ಬೆಳಗಲ್ಲು, ಪರಮದೇವನಹಳ್ಳಿ, ಮೋಕಾ, ಶಂಕರಬಂಡೆ, ಸಂಗನಕಲು, ಯರಗುಡಿ, ಸಿರುವಾರ ಸೇರಿದಂತೆ 9 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಕಾಯಕ ಮಿತ್ರಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲೇ ಅರ್ಜಿ ಪಡೆದು ಗ್ರಾಮ ಪಂಚಾಯತಿಯಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ.04 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.08392-266695 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Ballari: Grama kayaka mitra post and Resource person jobs

ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು 'ಗ್ರಾಮ ಕಾಯಕ ಮಿತ್ರ'ರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯತಿಗಳಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಅಭ್ಯರ್ಥಿಗಳು 2022ರ ಮೇ 04ಕ್ಕೆ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್‌ಕಾರ್ಡ್ ಹೊಂದಿರಬೇಕು. ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ 2022ರ ಜನವರಿ 1ಕ್ಕೆ ಅನ್ವಯಿಸುವಂತೆ 45 ವರ್ಷ ವಯೋಮಿತಿ ಮೀರಿರಬಾರದು.

ಅಭ್ಯರ್ಥಿಯು ಕಳೆದ 3 ವರ್ಷಗಳಲ್ಲಿ (2018-19, 2019-20 ಮತ್ತು 2020-21 ) ಕನಿಷ್ಠ 2 ವರ್ಷ ಯೋಜನೆಯಡಿ ಅಕುಶಲ ಕಾರ್ಮಿಕರಾಗಿ ಕೆಲಸ ನಿರ್ವಹಿಸಿರಬೇಕು. ಓದು, ಬರಹ ಚೆನ್ನಾಗಿ ತಿಳಿದಿರಬೇಕು. ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

MGNREGA


ಡೇ-ನಲ್ಮ್ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳ ನೇಮಕ:

ಕುಡಿತಿನಿ ಪಟ್ಟಣ ಪಂಚಾಯಿತಿ ವತಿಯಿಂದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿ ಡೇ-ನಲ್ಮ್ ಯೋಜನೆಯಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗೌರವಧನ ಆಧಾರದ ಮೇಲೆ ಸ್ವ-ಸಹಾಯ ಸಂಘ (ಗುಂಪು)ಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ವಿವರಗಳು: ಹುದ್ದೆಯ ಹೆಸರು ಸಮುದಾಯ ಸಂಪನ್ಮೂಲ ವ್ಯಕ್ತಿ, ಹುದ್ದೆ ಸಂಖ್ಯೆ-01, ಮಾಸಿಕ ಗೌರವಧನ ರೂ.8 ಸಾವಿರ, ಸಾರಿಗೆ 2 ಸಾವಿರ (ಅಗತ್ಯತೆಗೆ ತಕ್ಕಂತೆ ಗರಿಷ್ಠ), ಕೊನೆಯ ದಿನಾಂಕ ಮೇ02.ಆಗಿರುತ್ತದೆ.

ಅರ್ಹತೆಗಳು: ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು, ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಯಸ್ಸು 18 ರಿಂದ 45 ವರ್ಷ ವರ್ಷ ಒಳಗಿರಬೇಕು.

ಕುಡಿತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗುಂಪಿನ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಆಸಕ್ತ ಅರ್ಜಿದಾರರು ಕಚೇರಿಯ ಅವಧಿಯಲ್ಲಿ ಭೇಟಿ ನೀಡಿ ಮೇ.02 ರೊಳಗೆ ಅರ್ಜಿ ಸಲ್ಲಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+