Get Updates
Get notified of breaking news, exclusive insights, and must-see stories!

ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ ವೇತನ 30, 70 ಸಾವಿರ ರೂ.ಗಳು

ಬಳ್ಳಾರಿ, ಜನವರಿ, 01 : ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗುತ್ತಿಗೆ ಆಧಾರದಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನವಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಆಸಕ್ತ, ಅರ್ಹರು ಅರ್ಜಿಗಳನ್ನು ಸಲ್ಲಿಸಬಹುದು.

ನೇಮಕಾತಿಯೂ ಮುಖ್ಯ ಕಾನೂನು ನೆರವು ಅಭಿರಕ್ಷಕರ ಹುದ್ದೆ 1, ಉಪ ಕಾನೂನು ನೆರವು ಅಭಿರಕ್ಷಕರ ಹುದ್ದೆ 1 ಮತ್ತು ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆ 1 ಇವುಗಳಿಗೆ ನಡೆಯುತ್ತಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ.

Ballari Recruitment For Contract Based Positions Open Until January 10

ವೇತನ, ವಿದ್ಯಾರ್ಹತೆ ವಿವರ: ನೇಮಕಾತಿ ಅಧಿಸೂಚನೆಯಲ್ಲಿ ಮಾಸಿಕ ವೇತನ, ಅಭ್ಯರ್ಥಿಗಳ ವಿದ್ಯಾರ್ಹತೆ ವಿವರಗಳನ್ನು ನೀಡಲಾಗಿದೆ. ಮಾಸಿಕ ವೇತನ ಮುಖ್ಯ ಕಾನೂನು ನೆರವು ಅಭಿರಕ್ಷಕ ಹುದ್ದೆ ರೂ. 70,000, ಉಪ ಕಾನೂನು ನೆರವು ಅಭಿರಕ್ಷಕ ರೂ. 45,000 ಮತ್ತು ಸಹಾಯಕ ಕಾನೂನು ನೆರವು ಅಭಿರಕ್ಷಕ ರೂ. 30,000 ಎಂದು ನಿಗದಿ ಮಾಡಲಾಗಿದೆ.

ಮುಖ್ಯ ಕಾನೂನು ನೆರವು ಅಭಿರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10 ವರ್ಷಗಳ ಕಾಲ ಕ್ರಿಮಿನಲ್ ಕಾನೂನಿನಲ್ಲಿ ಅಭ್ಯಾಸ ಮಾಡಿರಬೇಕು. ಅತ್ಯುತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ ಹೊಂದಿರಬೇಕು. ಕ್ರಿಮಿನಲ್ ಕಾನೂನಿನ ಅತ್ಯುತ್ತಮ ತಿಳುವಳಿಕೆ, ರಕ್ಷಣಾ ಸಲಹೆಗಾರರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆ, ಸೆಷನ್ಸ್ ನ್ಯಾಯಾಲಯಗಳಲ್ಲಿ ಕನಿಷ್ಠ 30 ಕ್ರಿಮಿನಲ್ ವಿಚಾರಣೆಗಳನ್ನು ನಿರ್ವಹಿಸಿರಬೇಕು. 30 ಕ್ರಿಮಿನಲ್ ಪ್ರಕರಣಗಳ ನಿರ್ವಹಣೆಯ ಮೇಲಿನ ಷರತ್ತುಗಳನ್ನು ಸೂಕ್ತ ಸಂದರ್ಭಗಳಲ್ಲಿ ಸಡಿಲಿಸಬಹುದು. ಕಂಪ್ಯೂಟರ್ ವ್ಯವಸ್ಥೆಯ ಜ್ಞಾನ ಆದ್ಯತೆ, ಕಛೇರಿಯನ್ನು ನಿರ್ವಹಿಸುವ ಸಾಮರ್ಥ್ಯದೊಂದಿಗೆ ತಂಡವನ್ನು ಮುನ್ನಡೆಸಲು ಗುಣಮಟ್ಟದ ಕೌಶಲ್ಯ ಹೊಂದಿರಬೇಕು.

ಉಪ ಕಾನೂನು ನೆರವು ಅಭಿರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 7 ವರ್ಷಗಳ ಕಾಲ ಕ್ರಿಮಿನಲ್ ಕಾನೂನಿನಲ್ಲಿ ಅಭ್ಯಾಸ ಮಾಡಿರಬೇಕು. ಕ್ರಿಮಿನಲ್ ಕಾನೂನಿನ ಅತ್ಯುತ್ತಮ ತಿಳುವಳಿಕೆ, ಅತ್ಯುತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ, ಕಾನೂನು ಸಂಶೋಧನೆಯಲ್ಲಿ ಕೌಶಲ್ಯ, ರಕ್ಷಣಾ ಸಲಹೆಗಾರರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆ, ಇತರರೊಂದಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿರಬೇಕು. ಸೆಷನ್ಸ್ ನ್ಯಾಯಾಲಯಗಳಲ್ಲಿ ಕನಿಷ್ಠ 20 ಕ್ರಿಮಿನಲ್ ವಿಚಾರಣೆಗಳನ್ನು ನಿರ್ವಹಿಸಿರಬೇಕು, ಕೆಲಸದಲ್ಲಿ ಪ್ರಾವೀಣ್ಯತೆಯೊಂದಿಗೆ ಐಟಿ ಜ್ಞಾನ ಹೊಂದಿರಬೇಕು.

ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಕ್ರಿಮಿನಲ್ ಕಾನೂನಿನಲ್ಲಿ 3 ವರ್ಷಗಳವರೆಗೆ ಅಭ್ಯಾಸ ಮಾಡಿರಬೇಕು. ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ, ರಕ್ಷಣಾ ಸಲಹೆಗಾರರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆ, ಇತರರೊಂದಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ. ಅತ್ಯುತ್ತಮ ಬರವಣಿಗೆ ಮತ್ತು ಸಂಶೋಧನಾ ಕೌಶಲ್ಯ, ಕೆಲಸದಲ್ಲಿ ಹೆಚ್ಚಿನ ಪ್ರಾವೀಣ್ಯತೆಯೊಂದಿಗೆ ಐಟಿ ಜ್ಞಾನ ಹೊಂದಿರಬೇಕು.

ನೇಮಕಾತಿಯನ್ನು ಯಾವುದೇ ನೋಟಿಸ್ ನೀಡದೆ ರದ್ದುಗೊಳಿಸುವ ಅಧಿಕಾರ ಪ್ರಾಧಿಕಾರ ಹೊಂದಿರುತ್ತದೆ. ಅಭ್ಯರ್ಥಿಗಳು ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಕಚೇರಿಗೆ ಅರ್ಜಿ ಸಲ್ಲಿಸಬೇಕು ಹಾಗೂ ಇತ್ತೀಚಿನ 3 ಪಾಸ್ ಪೋಟೋ ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ತಾಳೂರು ರಸ್ತೆಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೂರನೇ ಮಹಡಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+