ಬಳ್ಳಾರಿಯಲ್ಲಿ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ, ಜುಲೈ 30 : ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 16, 2018 ಕೊನೆಯ ದಿನವಾಗಿದೆ.
24/03/2018ರಂದು ಹೊರಡಿಸಿದ್ದ ಅಧಿಸೂಚನೆಯನ್ನು ರಾಜ್ಯ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಒಟ್ಟು ಹುದ್ದೆಗಳು 38. ಪಿಯುಸಿ ಅಥವ ಸಿಬಿಎಸ್‌ಸಿ, ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದವರಿಗೆ 32, 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ -1 ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಶುಲ್ಕ : ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ವರ್ಗದವರಿಗೆ 200 ರೂ.. ಪ.ಜಾ/ಪ.ಪಂ/ಪ್ರವರ್ಗ -1, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ಮತ್ತು ಅಧಿಸೂಚನೆ ವಿವರಕ್ಕಾಗಿ ಕ್ಲಿಕ್ ಮಾಡಿ












Click it and Unblock the Notifications