ಬಳ್ಳಾರಿ ಜಿಲ್ಲಾ ಪಂಚಾಯಿತಿ ನೇಮಕಾತಿ; ಫೆ. 28ರ ತನಕ ಅರ್ಜಿ ಹಾಕಿ

ಬಳ್ಳಾರಿ, ಫೆಬ್ರವರಿ 12: ಬಳ್ಳಾರಿ ಜಿಲ್ಲಾ ಪಂಚಾಯಿತಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಮಾಡಲು 28/2/2024 ಕೊನೆಯ ದಿನವಾಗಿದೆ.

ಹೊಸದಾಗಿ 8 ಗ್ರಾಮ ಪಂಚಾಯಿತಿಗಳಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮಂಜೂರಾಗಿದೆ. ಪ್ರತಿ ಕೇಂದ್ರಕ್ಕೆ ಒಂದರಂತೆ ಒಟ್ಟು 8 ಹುದ್ದೆ ಮತ್ತು ರಾಜೀನಾಮೆ ನಿವೃತ್ತಿ ಕಾರಣಕ್ಕೆ ತೆರವಾದ 6 ಹುದ್ದೆಗಳು ಸೇರಿ 14 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

Ballari Zilla Panchayat Recruitment Apply For 14 Post

ವಿದ್ಯಾರ್ಹತೆಯ ಮಾಹಿತಿ; ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ದ್ವೀತಿಯ ಪದವಿ ಪೂರ್ವ ಪರೀಕ್ಷೆ (ಪಿಯುಸಿ) ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್‌ನಲ್ಲಿ ಪಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಟ 3 ತಿಂಗಳ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.

ಒಂದು ವೇಳೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ, ಪಿಯುಸಿ ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿದ ಅಂಕಗಳನ್ನು ಆಧರಿಸಿ ಅಧಿಸೂಚಿಸಿದ ಖಾಲಿ ಹುದ್ದೆಗಳಿಗೆ ರೋಸ್ಟರ್ ಬಿಂದುವಿನಂತೆ ಆಯ್ಕೆಗೆ ಪರಿಗಣಿಸಲಾಗುವುದು.

ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು. ವಿದ್ಯಾರ್ಹತೆಯ ದಾಖಲಾತಿಗಳ ನೈಜತೆ ಬಗ್ಗೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ದೃಢಪಡಿಸಿಕೊಂಡ ನಂತರ ನೇಮಕಾತಿ ಆದೇಶ ನೀಡಲಾಗುವುದು.

ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತತ್ಸಮಾನ ವಿದ್ಯಾರ್ಹನ ಹೊಂದಿಲ್ಲದಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು, ಪರಂತು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯ ಲಭ್ಯತೆ ಇಲ್ಲದೇ ಇದ್ದಲ್ಲಿ ಆಯಾ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯಿತಿಯ ಬೇರೆ ಗ್ರಾಮ ಪಂಚಾಯಿತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ.

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 28/2/2024ಕ್ಕೆ ಅಭ್ಯರ್ಥಿ 18 ವರ್ಷ ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35, 2ಎ/ 2ಬಿ/ 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 ವರ್ಷ. ಪ.ಜಾತಿ/ ಪ.ಪಂಗಡ/ ಪ್ರವರ್ಗ-1 40 ವರ್ಷಗಳು.

ಮೇಲ್ಕಂಡ ಗರಿಷ್ಠ ವಯೋಮಿತಿಯಲ್ಲದೆ ಕರ್ನಾಟಕ ನಾಗರೀಕಾ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977 ರಲ್ಲಿ ನಿರ್ದಿಷ್ಟಪಡಿಸಿರುವಂತೆ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಲಾಗುತ್ತದೆ.

ಅರ್ಜಿಯನ್ನು ಆನ್ ಲೈನ್ ಮೂಲಕ ವೆಬ್‌ಸೈಟ್ ವಿಳಾಸ https://ballari.nic.in ಮೂಲಕ ಸಲ್ಲಿಸುವುದು. ಅರ್ಜಿ ಶುಲ್ಕವನ್ನು ವಿನಾಯಿತಿಸಲಾಗಿದೆ. ನಿಗದಿಪಡಿಸಿದ ದಿನಾಂಕದಂದು ದಾಖಲಾತಿಗಳ ಪರಿಶೀಲನೆಗೆ ಹಾಜರಾಗದೇ ಇರುವ ಅಭ್ಯರ್ಥಿಗಳು ಅನರ್ಹಗೊಳ್ಳುತ್ತಾರೆ ಹಾಗೂ ಅವರ ಹಸರನ್ನು ನೇಮಕಾತಿ ಪ್ರಕ್ರಿಯೆಯಿಂದ ಕೈಬಿಡಲಾಗುವುದು. ಅರ್ಜಿಯಲ್ಲಿ ಕೇಳಿರುವ ಪೂರ್ಣ ಮಾಹಿತಿಯನ್ನು ಭರ್ತಿ ಮಾಡಿಲ್ಲದೇ ಇರುವ ಅಭ್ಯರ್ಥಿಗಳ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೇ ತಿರಸ್ಕರಿಸಲಾಗುವುದು. ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಓದಲು, ಬರೆಯಲು ಮತ್ತು ಅರ್ಥ ಮಾಡಿಕೊಳ್ಳುವ ಜ್ಞಾನದ ಅವಶ್ಯಕತೆ ಕಡ್ಡಾಯ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸುವುದು ಹಾಗೂ ಸ್ಪಷ್ಟೀಕರಣ ಅವಶ್ಯವಿದ್ದಲ್ಲಿ ಸಹಾಯವಾಣಿ ಸಹಾಯವಾಣಿ ಸಂಖ್ಯೆ 9986506322ಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಮೇಲಿನ ನಿಗದಿತ ಶೈಕ್ಷಣಿಕ ವಿದ್ಯಾರ್ಹತೆಯ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಸಂಬಂಧಪಟ್ಟ ಎಲ್ಲಾ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಕಡ್ಡಾಯವಾಗಿ ಪಡೆದಿಟ್ಟುಕೊಂಡು, ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ಅವರ ಮೀಸಲಾತಿ/ ಅಭ್ಯರ್ಥಿತನವನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+