ಪಿಯುಸಿ ಪಾಸಾದವರಿಗೆ ಬೆಂಗಳೂರು, ಚೆನ್ನೈನಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಜುಲೈ 23 : Balmer Lawrie & Co. Limited ಬೆಂಗಳೂರು ಸೇರಿದಂತೆ ವಿವಿಧ ನಗರದಲ್ಲಿ 29 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 7 ಆಗಸ್ಟ್ 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಟಿಕೆಟಿಂಗ್ ಕನ್ಸ್‌ಲ್ಟ್‌ಟೆಂಟ್ 16, ಟ್ರಾವೆಲ್ ಕನ್ಸ್‌ಲ್ಟ್‌ಟೆಂಟ್ 13 ಹುದ್ದೆಗಳನ್ನು Balmer Lawrie & Co. Limited ಭರ್ತಿ ಮಾಡುತ್ತಿದೆ. ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಚೆನ್ನೈ, ಮುಂಬೈನಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕೆಲಸ ಮಾಡಬೇಕಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಜ್ಯ ಅಥವ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಿಂದ 12ನೇ ತರಗತಿಯನ್ನು ಶೇ 50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವೇತನ ಶ್ರೇಣಿಯ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 14 ರಿಂದ 21 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 17 ಜುಲೈ 2018ಕ್ಕೆ ಅನ್ವಯವಾಗುವಂತೆ. ಯಾವುದೇ ಅರ್ಜಿ ಶುಲ್ಕಗಳನ್ನು ಪಾವತಿ ಮಾಡಬೇಕಿಲ್ಲ.
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications