ಬಾಮರ್ ಲಾರೀ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ನವೆಂಬರ್ 29 : ಬೆಂಗಳೂರಿನ ಬಾಮರ್ ಲಾರೀ ಕಂಪನಿ ಲಿಮಿಟೆಡ್‌ 53 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 7/12/2018 ಕೊನೆಯ ದಿನವಾಗಿದೆ.

ಡೆಪ್ಯೂಟಿ ಮ್ಯಾನೇಜರ್, ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ 53 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳು ಮುಂಬೈ, ಅಹಮದಾಬಾದ್, ದೆಹಲಿ, ಹೈದರಾಬಾದ್, ಚೆನ್ನೈ, ಕೊಯಮತ್ತೂರು, ಕೋಲ್ಕತ್ತಾ, ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

Balmer Lawrie recruitment 2018 : Apply for 53 Various Vacancies

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಟಿಎಂ ಅಥವ ತತ್ಸಮಾನ/ಎಂಬಿಎ/ಇಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು.

ಡೆಪ್ಯೂಟಿ ಮ್ಯಾನೇಜರ್, ಮ್ಯಾನೇಜರ್ ಹುದ್ದೆಗೆ 32 ವರ್ಷ (ಎಫ್‌ಟಿಇ2) 37 ವರ್ಷ (ಎಫ್‌ಟಿಇ3). ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+