ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದಲ್ಲಿ ನೇಮಕಾತಿ
ಬೆಂಗಳೂರು, ಜನವರಿ 4: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ 297 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿವಿಧ ನಮೂನೆಯಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಫೆಬ್ರವರಿ 03, 2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ ಲಿಮೆಟೆಡ್ (ಬಮೂಲ್)
ಹುದ್ದೆ ಹೆಸರು: ಸಹಾಯಕ ಮ್ಯಾನೇಜರ್, ಕೃಷಿ ಅಧಿಕಾರಿ ಹಾಗೂ ಇತರೆ ಹುದ್ದೆ.
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಫೆಬ್ರವರಿ 03, 2021.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ.

ವಯೋಮಿತಿ: 03 ಫೆಬ್ರವರಿ 2021ಕ್ಕೆ ಅನ್ವಯವಾಗುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18ರಿಂದ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ವಿಧಾನ: ಮೇಲಿನ ಕೆಲ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ಅಭ್ಯರ್ಥಿಗಳು ಪಡೆದ ಅಂಕಗಳ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 04.01.2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 03.02.2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications