ಬೆಂಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ; ಫೆ. 28ರ ತನಕ ಅರ್ಜಿ ಹಾಕಿ
ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ. 96 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಬೆಂಗಳೂರು, ಜನವರಿ 31; ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ. ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಫೆಬ್ರವರಿ 28 ಕೊನೆಯ ದಿನವಾಗಿದೆ.
ವಿವಿಧ ವೃಂದದ 96 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ. ಖುದ್ದಾಗಿ/ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶವಿಲ್ಲ.
ಕಿರಿಯ ಆಡಳಿತ ವರ್ಗ-1 (ಶಾಖಾ ವ್ಯವಸ್ಥಾಪಕರು) 4 ಹುದ್ದೆಗಳು. (ಗ್ರೂಪ್ ಬಿ-1) ಹಿರಿಯ ಸಹಾಯಕರು 19 ಹುದ್ದೆಗಳು. (ಗ್ರೂಪ್ ಬಿ-1) ಶೀಘ್ರಲಿಪಿಗಾರರು 1 ಹುದ್ದೆ. (ಗ್ರೂಪ್ ಬಿ -2) ಕಿರಿಯ ಸಹಾಯಕರು 43. (ಗ್ರೂಪ್ ಬಿ -2) ಕಂಪ್ಯೂಟರ್ ಆಪರೇಟರ್ 2 ಹುದ್ದೆ. (ಗ್ರೂಪ್ ಸಿ) ವಾಹನ ಚಾಲಕರು 4 ಹುದ್ದೆಗಳು. (ಗ್ರೂಪ್ ಸಿ) ನಾಲ್ಕನೇ ದರ್ಜೆ ನೌಕರರು 23 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಈ ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿರುವ ಹುದ್ದೆಗಳ ಸಂಖ್ಯೆ ಮತ್ತು ವರ್ಗೀಕರಣವು ಅನಿವಾರ್ಯ ಸಂದರ್ಭದಲ್ಲಿ ಬದಲಾವಣೆಯಾಗಬಹುದಾಗಿದ್ದು, ನೇಮಕಾತಿ ಪ್ರಾಧಿಕಾರ ಬದಲಾವಣೆ ಮಾಡುವ ಮತ್ತು ರದ್ದುಪಡಿಸುವ ಅಧಿಕಾರವನ್ನು ಕಾಯ್ದಿರಿಸಿಕೊಂಡಿದೆ.
ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸತಕ್ಕದ್ದು. ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದ್ದಲ್ಲಿ ಅರ್ಹತೆ ಪಡೆದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುತ್ತದೆ. ಅರ್ಜಿಯನ್ನು ಭರ್ತಿ ಮಾಡುವ ಮೊದಲು ಸೂಚನೆಗಳನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು. ಅಪೂರ್ಣ ಮಾಹಿತಿ ನೀಡಿದ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.
ವಯೋಮಿತಿ; ಅರ್ಜಿಗಳನ್ನು ಸಲ್ಲಿಸುವವರಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ. 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 40 ವರ್ಷಗಳು.

ಅರ್ಜಿ ಶುಲ್ಕದ ಮಾಹಿತಿ; ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ವರ್ಗ, ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗಳು 1500 ರೂ. ಶುಲ್ಕ ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 750 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ಮಾಡಲು, ಹೆಚ್ಚಿನ ಮಾಹಿತಿಗಾಗಿ ವಿಳಾಸ https://www.bengalurudccbank.com/











Click it and Unblock the Notifications