ಬೆಂಗಳೂರು ಜಿಲ್ಲಾ ಕೋರ್ಟಿನಲ್ಲಿ ವಿವಿಧ ಹುದ್ದೆಗಳಿವೆ, ಅರ್ಜಿಹಾಕಿ
ಬೆಂಗಳೂರು, ಅಕ್ಟೋಬರ್ 24: ಬೆಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 218 ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ನ್ಯಾಯಾಂಗವು ಅಧಿಸೂಚನೆ ಹೊರಡಿಸಿದೆ.
60 ಬೆರಳಚ್ಚುಗಾರ, 66 ಟೈಪಿಸ್ಟ್, 30 ಟೈಪಿಸ್ಟ್ ಕಾಪಿಸ್ಟ್ ಮತ್ತು 62 ಜವಾನ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್ 15,2017ರೊಳಗೆ ವೆಬ್‌ಸೈಟ್‌ನಲ್ಲಿ ಇರುವ ನಿಗದಿತ ಅರ್ಜಿ ನಮೂನೆ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆ: * Stenographer: 60, *Typist: 66, *Typist Copyist: 30, Peon: 62
ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗದವರಿಗೆ 35 ವರ್ಷ/ಪ್ರವರ್ಗ 2ಎ/2ಬಿ/3ಎ/3ಬಿ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರ ಬೇಕು. ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆ ಸುವ ಸೆಕ್ರೆಟೆರಿಯ ಲ್ ಪ್ರ್ಯಾಕ್ಟೀಸ್ ಪಠ್ಯಕ್ರಮದ ಡಿಪ್ಲೊಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳನ್ನು ಐಚ್ಛಿಕವಾಗಿ ಹೊಂದಿರಬೇಕು.
* ಪ್ರತಿ ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನ ತೆಗೆದುಕೊಂಡು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಅರ್ಹತಾ ಪರೀಕ್ಶೆಗಳಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ

ಸಂಬಳ-11600 ರಿಂದ 21000
ವಿದ್ಯಾರ್ಹತೆ: ಸ್ಟೆನೋಗ್ರಾಫರ್ ಗೆ ಅನ್ವಯವಾಗುವ ಅರ್ಹತೆ ಇದಕ್ಕೂ ಅನ್ವಯ.

ವೇತನ: 9600 ರಿಂದ 14550
ವಿದ್ಯಾರ್ಹತೆ: ಏಳನೇ ತರಗತಿ ಪಾಸ್, ಕನ್ನಡ ಓದಲು ಬರಬೇಕು.
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

ಆಯ್ಕೆ ವಿಧಾನ
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಮೇಲೆ ತಿಳಿಸಲಾಗಿರುವ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಬಗ್ಗೆ ಕರ್ನಾಟಕ ನ್ಯಾಯಾಂಗ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗುತ್ತದೆ.












Click it and Unblock the Notifications