ಬೆಂಗಳೂರಲ್ಲಿ ಕೆಲಸ ಖಾಲಿ ಇದೆ; ಮೇ 20ರ ತನಕ ಅರ್ಜಿ ಹಾಕಿ
ಬೆಂಗಳೂರು, ಏಪ್ರಿಲ್ 24; ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 20/5/2022 ಕೊನೆಯ ದಿನವಾಗಿದೆ.
ಶೀಘ್ರಲಿಪಿಗಾರರು ಗ್ರೇಡ್-3, ಬೆರಳಚ್ಚುಗಾರರು, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬೇಕಿದೆ.
ಶೀಘ್ರಲಿಪಿಗಾರರು ಗ್ರೇಡ್-3 17, ಬೆರಳಚ್ಚುಗಾರರು 24, ಆದೇಶ ಜಾರಿಕಾರರು 5 ಹಾಗೂ ಜವಾನ 87 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) ನಿಯಮಗಳು 1982 ಹಾಗೂ ತಿದ್ದುಪಡಿ ನಿಯಮಗಳು 2007 ಮತ್ತು 2021ರ ಅನ್ವಯ ನೇಮಕಾತಿ ಮಾಡಲಾಗುತ್ತದೆ.

ಅಭ್ಯರ್ಥಿಗಳು ಏಪ್ರಿಲ್ 21ರಿಂದ 20 ಮೇ 2022ರ ರಾತ್ರಿ 11.59ರ ತನಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ನಿಗದಿತ ಶುಲ್ಕ ಪಾವತಿ ಮಾಡಬೇಕು. ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.
ಶುಲ್ಕದ ವಿವರಗಳು; ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 200 ರೂ., ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿದ ಮೇಲೆ ಅರ್ಜಿಯಲ್ಲಿ ಸೂಚಿಸಿದಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಲೆಕ್ಟ್ ಪೇಜ್‌ನಲ್ಲಿ ಅಥವ ಇಂಟರ್‌ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಶುಲ್ಕವನ್ನು ಸಂದಾಯ ಮಾಡತಕ್ಕದ್ದು.
ಶುಲ್ಕವನ್ನು ವಿಲೇಖನಾಧಿಕಾರಿಗಳು ನಗರ ಸಿವಿಲ್ ನ್ಯಾಯಾಲಯ ಬೆಂಗಳೂರು ಇವರ ಹೆಸರಿಗೆ ಪಾವತಿ ಮಾಡಬೇಕು. ಬೇರೆ ಯಾವುದೇ ಹೆಸರಿನಲ್ಲಿ ಪಾವತಿಸಿದ ಶುಲ್ಕವನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.
ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲ. ನಿಗದಿತ ಶುಲ್ಕವನ್ನು ಪಾವತಿ ಮಾಡದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.
ವಯೋಮಿತಿ ವಿವರಗಳು; ಅರ್ಜಿಗಳನ್ನು ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತೆ ಇರಬೇಕು.
ಸಾಮಾನ್ಯ ಅಭ್ಯರ್ಥಿಗೆ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.
ವಿದ್ಯಾರ್ಹತೆ ವಿವರಗಳು; ಶೀಘ್ರಲಿಪಿಗಾರರು ಗ್ರೇಡ್-3 ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪದವಿ ಪೂರ್ವ ಪರೀಕ್ಷಾ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ಮೂರು ವರ್ಷದ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಶ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು ಅಥವ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರಬೇಕು.
ಆದೇಶ ಜಾರಿಕಾರ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಾಹನ ಚಾಲನಾ ಪರವಾನಗಿ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
ಜವಾನ ಹುದ್ದೆಗಳಿಗೆ ಸಹ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು.
ಸೇವಾ ಅವಧಿ ವಿವರ; ಅಭ್ಯರ್ಥಿಯು ನೇಮಕಗೊಂಡ ಪಕ್ಷದಲ್ಲಿ ಪ್ರಾರಂಭಿಕವಾಗಿ ಎರಡು ವರ್ಷಗಳ ಅವಧಿಗೆ ಅಥವ ಅಗತ್ಯವಿದ್ದರೆ ವಿಸ್ತರಿಸಬಹುದಾದದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.
ಅಭ್ಯರ್ಥಿ ಅರ್ಜಿ ಸಲ್ಲಿಸುವಾಗ ಸರಿಯಾದ ಇ-ಮೇಲ್ ವಿಳಾಸ, ಮೊಬೈಲ್ ಸಂಖ್ಯೆಯನ್ನು ನೀಡಬೇಕು. ಬೆರಳಚ್ಚು ಪರೀಕ್ಷೆ/ ಮೌಖಿಕ ಸಂದರ್ಶನಕ್ಕೆ ತನ್ನ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ವಿಳಾಸ https://districts.ecourts.gov.in/karnataka












Click it and Unblock the Notifications