ಬೆಂಗಳೂರು ಗ್ರಾಮಾಂತರ ಕೋರ್ಟ್‌ನಲ್ಲಿ 18 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಜನವರಿ 08 : ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 7/2/2019 ಕೊನೆಯ ದಿನವಾಗಿದೆ.
ಒಟ್ಟು 18 ಬೆರಳಚ್ಚುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗದಿಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಖುದ್ದಾಗಿ ಅಥವ ಅಂಚೆ ಅಥವ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಪ್ರೌಢದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಗಣಕಯಂತ್ರದ ಸಾಮಾನ್ಯ/,ಮೂಲ ಜ್ಞಾನ ಇರುವವರಿಗೆ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂತೆ ಕನಿಷ್ಠ ವಯೋಮಿತಿ 18 ವರ್ಷ. ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು, ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕಗಳು : ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3 ಬಿ ಅಭ್ಯರ್ಥಿಗಳಿಗೆ 200 ರೂ., ಪ.ಜಾ/ಪ.ಪಂ, ಪ್ರವರ್ಗ -1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ಆನ್‌ಲೈನ್ ಪೇಮೆಂಟ್ ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಚಲನ್ ಡೌನ್‌ಲೋಡ್ ಸೌಲಭ್ಯದ ಮೂಲಕ ಪಾವತಿ ಮಾಡತಕ್ಕದ್ದು.
ಅರ್ಜಿಗಳನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications