ಬೆಂಗಳೂರು ಗ್ರಾಮಾಂತರ ಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಡಿಸೆಂಬರ್ 18 : ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 16/1/2019 ಕೊನೆಯ ದಿನವಾಗಿದೆ.

ಒಟ್ಟು 4 ಹುದ್ದೆಗಳು ಖಾಲಿ ಇವೆ. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಶ್ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಗಣಕ ಯಂತ್ರದ ಸಾಮಾನ್ಯ ಜ್ಞಾನ ಅಗತ್ಯ.

jobs

ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38, ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ : ಸಾಮಾನ್ಯ, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 200 ರೂ., ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಹಾಗೂ ವಿಕಲಚೇತನರಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.

ನೇಮಕಾತಿ ಆದೇಶ ಓದಲು ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+