ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ವಿವಿ ಬೋಧಕ ಹುದ್ದೆ ನೇಮಕಾತಿ; ವಿವರಗಳು

|
Google Oneindia Kannada News

ಬೆಂಗಳೂರು, ಜೂನ್ 23; ಬೆಂಗಳೂರುವಿಶ್ವವಿದ್ಯಾಲಯ 2021-22ನೇ ಸಾಲಿನಲ್ಲಿ ಬ್ಯಾಕ್ ಲಾಗ್ ಬೋಧಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಬುಧವಾರ ನೇಮಕಾತಿ ಆದೇಶ ಪ್ರಕಟವಾಗಲಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳ ಅಭ್ಯರ್ಥಿಗಳು ಸಹ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.

ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿ; ವಿವರಗಳು ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿ; ವಿವರಗಳು

ವಿದ್ಯಾರ್ಹತೆ, ಅರ್ಜಿ ನಮೂನೆ ಸೇರಿದಂತೆ ಇತರ ವಿವರಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಜೂನ್ 23ರಂದು ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 30/7/2021 ಕೊನೆಯ ದಿನವಾಗಿದೆ.

ಕರ್ನಾಟಕ; ಪಶು ವೈದ್ಯಕೀಯ ಇಲಾಖೆ ನೇಮಕಾತಿ ವಿವರಗಳು ಕರ್ನಾಟಕ; ಪಶು ವೈದ್ಯಕೀಯ ಇಲಾಖೆ ನೇಮಕಾತಿ ವಿವರಗಳು

Bangalore University Recruitment Notification 2021

ಪ್ರೊಫೆಸರ್ 5, ಅಸೋಸಿಯೇಟ್ ಪ್ರೊಫೆಸರ್ 6, ಅಸಿಸ್ಟೆಂಟ್ ಪ್ರೊಫೆಸರ್ 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪ್ರೊಫೆಸರ್ ಮತ್ತುಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ 500 ರೂ.ಗಳು, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ 250 ರೂ. ಶುಲ್ಕವನ್ನು ಪಾವತಿ ಮಾಡಬೇಕು.

ಉಬರ್ ನೇಮಕಾತಿ: ಬೆಂಗಳೂರು, ಹೈದರಾಬಾದ್‌ನಲ್ಲಿ ವಿವಿಧ ಹುದ್ದೆ ಉಬರ್ ನೇಮಕಾತಿ: ಬೆಂಗಳೂರು, ಹೈದರಾಬಾದ್‌ನಲ್ಲಿ ವಿವಿಧ ಹುದ್ದೆ

ಪ್ರೊಫೆಸರ್ ಹುದ್ದೆಗೆ ಮಾಸಿಕ 1,44,200 ರಿಂದ 2,18,200 ರೂ. ವೇತನ ನಿಗದಿ ಮಾಡಲಾಗಿದೆ. ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಮಾಸಿಕ 1,31,400 ರಿಂದ 2,17,100 ರೂ. ವೇತನ ನಿಗದಿ ಮಾಡಲಾಗಿದೆ. ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ 57,700 ರಿಂದ 1,82,400 ರೂ. ವೇತನವಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ ರಿಜಿಸ್ಟಾರ್, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು 560056 ವಿಳಾಸಕ್ಕೆ ಕಳಿಸಬೇಕು.

Recommended Video

ಎಚ್ಚರಿಕೆ! ಭಾರತದಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ವೈರಸ್:ರಾಜ್ಯದಲ್ಲಿ 2 ಕೇಸ್ ಪತ್ತೆ | Oneindia Kannada

ಹೆಚ್ಚಿನ ಮಾಹಿತಿಗಾಗಿ https://bangaloreuniversity.ac.in/ ವೆಬ್‌ ಸೈಟ್‌ಗೆ ಭೇಟಿ ನೀಡಿ.

English summary
Apply for assistant professor, associate professor and professor post in Bangalore university. Candidates can submit applications till 30/7/2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X